Categories: LatestPolitics

ರಾಜ್ಯ ಸರ್ಕಾರದಿಂದ ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ; ವಿವಿಧ ಇಲಾಖೆಗಳಿಗೆ ಹೊಸ ನೇಮಕಾತಿ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಾತ್ಮಕ ಪುನರ್‌ವ್ಯವಸ್ಥೆಯ ಭಾಗವಾಗಿ ಸ್ಥಳ ನಿಯುಕ್ತಿ ನಿರೀಕ್ಷೆಯಲ್ಲಿದ್ದ ನಾಲ್ವರು ಐಎಎಸ್ ಅಧಿಕಾರಿಗಳನ್ನು ವಿವಿಧ ಪ್ರಮುಖ ಹುದ್ದೆಗಳಿಗೆ ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಕರ್ನಾಟಕ ಗಣಿಗಾರಿಕೆ ಪರಿಸರ ಮರುಸ್ಥಾಪನಾ ನಿಗಮ (ಕೆಎಂಇಆರ್‌ಸಿ)ದ ವ್ಯವಸ್ಥಾಪಕ ನಿರ್ದೇಶಕರಾಗಿ ಅಭಿರಾಮ್ ಜಿ. ಶಂಕರ್ ಅವರನ್ನು ನೇಮಕ ಮಾಡಲಾಗಿದೆ. ಜೂನ್ 30ರಂದು ನಿವೃತ್ತಿಯಾಗುತ್ತಿರುವ ಐಎಫ್‌ಎಸ್ ಅಧಿಕಾರಿ ಡಾ. ಸಂಜಯ್ ಎಸ್. ಬಿಜ್ಜೂರ್ ಅವರಿಂದ ತೆರವಾಗುತ್ತಿರುವ ಹುದ್ದೆಗೆ ಅವರನ್ನು ನಿಯೋಜಿಸಲಾಗಿದೆ.

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ-ಬಿಟಿ) ಇಲಾಖೆಯ ನಿರ್ದೇಶಕರಾಗಿ ಡಾ. ಅವಿನಾಶ್ ಮೆನನ್ ಅವರನ್ನು ನೇಮಕ ಮಾಡಲಾಗಿದೆ. ಜೊತೆಗೆ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್)ದ ವ್ಯವಸ್ಥಾಪಕ ನಿರ್ದೇಶಕರ ಹೆಚ್ಚುವರಿ ಹೊಣೆಗಾರಿಕೆಯನ್ನೂ ಅವರಿಗೆ ವಹಿಸಲಾಗಿದೆ.

ಬೆಂಗಳೂರಿನ ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕರಾಗಿ ಯೋಗೀಶ್ ಎ.ಎಂ. ಅವರನ್ನು ನೇಮಕ ಮಾಡಲಾಗಿದೆ. ಈವರೆಗೆ ಈ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಪ್ರಸನ್ನ ಎಚ್. ಅವರನ್ನು ಆ ಹೊಣೆಗಾರಿಕೆಯಿಂದ ಬಿಡುಗಡೆ ಮಾಡಲಾಗಿದೆ.

ಇದೇ ವೇಳೆ, ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಆಯುಕ್ತರಾಗಿ ದಿವ್ಯಾ ಪ್ರಭು ಜಿ.ಆರ್.ಜೆ. ಅವರನ್ನು ನೇಮಕ ಮಾಡಲಾಗಿದೆ. ಈ ಹುದ್ದೆಯ ಹೆಚ್ಚುವರಿ ಪ್ರಭಾರದಲ್ಲಿದ್ದ ಡಾ. ಅರುಂಧತಿ ಚಂದ್ರಶೇಖರ್ ಅವರನ್ನು ತಕ್ಷಣದಿಂದಲೇ ಆ ಜವಾಬ್ದಾರಿಯಿಂದ ಬಿಡುಗಡೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ವರ್ಗಾವಣೆಗಳ ಮೂಲಕ ವಿವಿಧ ಪ್ರಮುಖ ಇಲಾಖೆಗಳ ಆಡಳಿತವನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿದುಬಂದಿದೆ.

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

11 minutes ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

2 hours ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

1 day ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

1 day ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

1 day ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

1 day ago