Latest

ಅಪ್ರಾಪ್ತೆಯ ಮೇಲೆ ಮಲತಂದೆಯಿಂದ ಲೈಂಗಿಕ ದೌರ್ಜನ್ಯ: ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ

ತುಮಕೂರಿನಲ್ಲಿ ಮಕಳ ಭದ್ರತೆಗೆ ಸಂಬಂಧಿಸಿದ ಭಯಾನಕ ಪ್ರಕರಣವೊಂದು ನ್ಯಾಯದ ತುದಿಗೆ ತಲುಪಿದ್ದು, ಅಪ್ರಾಪ್ತ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪಿತೃಸಮಾನ ವ್ಯಕ್ತಿಗೆ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ.

ಖಮೀಲ್ ಪಾಷ ಎಂಬಾತನು ತನ್ನ ಎರಡನೇ ಮದುವೆಯಿಂದ ಜನಿಸಿದ್ದ ಮಗಳ ಮೇಲೆಯೇ ನಿಂತರವಾಗಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಈ ಘೋರ ಕೃತ್ಯವನ್ನು ಮಗು ಯಾರಿಗೂ ತಿಳಿಸದಂತೆ ತಡೆಗಟ್ಟಲು, ಆತ ತನ್ನ ಹೆಂಡತಿಯನ್ನು ಕೊಲ್ಲುವ ಬೆದರಿಕೆ ನೀಡುತ್ತಿದ್ದ ಎನ್ನಲಾಗಿದೆ.

ಈ ಕುರಿತು 2022ರ ಡಿಸೆಂಬರ್ 6ರಂದು ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗಕ್ಕೆ ಒಪ್ಪಿಸಿದ್ದರು.

ಇದೀಗ, ತುಮಕೂರು ಜಿಲ್ಲಾ ಪೋಕ್ಸೋ (POCSO) ವಿಶೇಷ ನ್ಯಾಯಾಲಯವು ಈ ಪ್ರಕರಣದಲ್ಲಿ ತೀರ್ಪು ನೀಡಿದ್ದು, ಆರೋಪಿ ಖಮೀಲ್ ಪಾಷಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ 1.50 ಲಕ್ಷ ರೂ ದಂಡ ವಿಧಿಸಿದೆ. ಜೊತೆಗೆ, ನೊಂದ ಬಾಲಕಿಗೆ 11 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಬಾಲಕಿ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಆಶಾ ಕೆ.ಎಸ್. ಅವರು ನ್ಯಾಯಾಲಯದಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸಿದ್ದರು.

ಈ ತೀರ್ಪು ಮಕ್ಕಳು ಹಾಗೂ ಮಹಿಳೆಯರ ರಕ್ಷಣೆಯತ್ತ ಒಂದು ಬಲವಾದ ಹೆಜ್ಜೆಯಾಗಿದೆ ಎಂಬ ಅಭಿಪ್ರಾಯವು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

16 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago