Categories: LatestPolitics

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು ಸರ್ಕಾರಿ ನೌಕರರೊಂದಿಗೆ ನಡೆಸಿದ ಸಂವಾದದಲ್ಲಿ ನೀಡಿರುವ ನಿರ್ದೇಶನಗಳನ್ನು ಅಧಿಕಾರಿಗಳು ಮತ್ತು ಸಿಬ್ಬಂದಿ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.

ಮಂಗಳವಾರ ಕ್ರಿಮ್ಸ್‌ನಲ್ಲಿ ನಡೆದ ಸರ್ಕಾರಿ ನೌಕರರು ಹಾಗೂ ಮುಖ್ಯಮಂತ್ರಿ ಅವರ ಸಂವಾದ ಕಾರ್ಯಕ್ರಮದ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸಾರ್ವಜನಿಕ ಸೇವೆ, ಆಡಳಿತದ ಪಾರದರ್ಶಕತೆ ಹಾಗೂ ಇಲಾಖೆಗಳ ಕಾರ್ಯನಿರ್ವಹಣೆ ಕುರಿತು ಹಲವು ಮಹತ್ವದ ನಿರ್ದೇಶನಗಳನ್ನು ನೀಡಿದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮಗೆ ನಿಯೋಜಿಸಿರುವ ಕೇಂದ್ರಸ್ಥಾನದಲ್ಲಿಯೇ ಕಡ್ಡಾಯವಾಗಿ ವಾಸಿಸಬೇಕು. ಕೇಂದ್ರಸ್ಥಾನದಿಂದ ಹೊರಗಡೆ ವಾಸವಿದ್ದು ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.

ಆಗಸ್ಟ್ 15ರೊಳಗೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಹೆಸರು, ಕಚೇರಿ ವಿಳಾಸ, ಮೊಬೈಲ್ ಸಂಖ್ಯೆ ಮತ್ತು ವಾಸದ ವಿಳಾಸ ಸೇರಿದಂತೆ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ ಅಧಿಕೃತ ಕೈಪಿಡಿ ಸಿದ್ಧಪಡಿಸಲಾಗುವುದು ಎಂದು ಅವರು ತಿಳಿಸಿದರು.

ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ

ಸರ್ಕಾರಿ ಕಚೇರಿಗಳಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು. ಸಾರ್ವಜನಿಕರು ಭ್ರಷ್ಟಾಚಾರದ ಕುರಿತು ದೂರು ನೀಡಲು ಅನುಕೂಲವಾಗುವಂತೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿಯ ಫಲಕಗಳನ್ನು ಪ್ರತಿಯೊಂದು ಕಚೇರಿಯಲ್ಲೂ ಕಡ್ಡಾಯವಾಗಿ ಅಳವಡಿಸಬೇಕು ಎಂದು ಸೂಚಿಸಿದರು.

ಸಾರ್ವಜನಿಕರಿಂದ ಸಲ್ಲಿಕೆಯಾಗುವ ದೂರುಗಳ ಮೇಲೆ ಮುಖ್ಯಮಂತ್ರಿಗಳ ಕಚೇರಿಯಿಂದಲೂ ನಿಗಾ ವಹಿಸಲಾಗುತ್ತಿದೆ. ಅಧಿಕಾರಿಗಳು ಅಥವಾ ಸಿಬ್ಬಂದಿಯ ಕರ್ತವ್ಯಲೋಪ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಜನಸ್ಪಂದನ ಸಭೆಗಳಿಗೆ ಆದ್ಯತೆ

ಸಾರ್ವಜನಿಕರ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ‘ಪ್ರಜಾಸೇವೆ’ ಇಲಾಖೆ ರೂಪಿಸಲಾಗಿದೆ. ಇದರ ಕಾರ್ಯನಿರ್ವಹಣೆಯನ್ನು ಹಿರಿಯ ಅಧಿಕಾರಿಗಳ ತಂಡ ಮೇಲ್ವಿಚಾರಣೆ ಮಾಡಲಿದೆ. ಜಿಲ್ಲೆ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ನಿಯಮಿತವಾಗಿ ಜನಸ್ಪಂದನ ಸಭೆಗಳನ್ನು ನಡೆಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಮತದಾರರ ಪಟ್ಟಿ ಪರಿಶೀಲನೆಗೆ ಸೂಚನೆ

ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಶೇ.100ರಷ್ಟು ಡಿಜಿಟಲೀಕರಣ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಹೆಸರು ಅಥವಾ ಇತರ ವಿವರಗಳಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಅಗತ್ಯ ದಾಖಲೆಗಳೊಂದಿಗೆ ತಿದ್ದುಪಡಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಅನಗತ್ಯವಾಗಿ ಯಾವುದೇ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಬಾರದು. ಈಗಾಗಲೇ ನಡೆದಿರುವ ಹೆಸರುಗಳ ಡಿಲೀಷನ್‌ಗಳನ್ನು ಬಿಎಲ್‌ಒಗಳು ಮರುಪರಿಶೀಲಿಸಿ, ಅರ್ಹ ಮತದಾರರ ಹೆಸರುಗಳು ಪಟ್ಟಿಯಲ್ಲಿ ಉಳಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನೀಡಲಾಗುವ ನಿರ್ದೇಶನಗಳು ಕೆಳಹಂತದ ಸಿಬ್ಬಂದಿಗೂ ಸಮರ್ಪಕವಾಗಿ ತಲುಪಿ ಅನುಷ್ಠಾನಗೊಳ್ಳಬೇಕು. ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಣೆಗೆ ರಾಜ್ಯ ಮಟ್ಟದಲ್ಲಿ ಉತ್ತಮ ಹೆಸರು ಇದ್ದು, ಅದನ್ನು ಮತ್ತಷ್ಟು ವೃದ್ಧಿಸುವ ನಿಟ್ಟಿನಲ್ಲಿ ಎಲ್ಲರೂ ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

‘ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡಿ: ಮುಖ್ಯಮಂತ್ರಿ

ಇದೇ ವೇಳೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸರ್ಕಾರಿ ನೌಕರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರಿ ನೌಕರರಿಗೆ ಜನಪರ ಆಡಳಿತದ ಸಂದೇಶ ನೀಡಿದರು.

“ನಾನು ಸೇರಿದಂತೆ ಸಚಿವ ಸಂಪುಟ ಹಾಗೂ ಅಧಿಕಾರಿಗಳೆಲ್ಲರೂ ಸರ್ಕಾರಿ ನೌಕರರು. ನಮ್ಮದು ಟೀಮ್ ಕರ್ನಾಟಕ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಕಲ್ಯಾಣ ಮಾಡುವುದು ನಮ್ಮ ಗುರಿ,” ಎಂದು ಮುಖ್ಯಮಂತ್ರಿ ಕರೆ ನೀಡಿದರು.

ರಾಜ್ಯದ ಜನರ ಸೇವೆ ಮಾಡುವ ಅಪರೂಪದ ಅವಕಾಶ 5.50 ಲಕ್ಷ ಸರ್ಕಾರಿ ನೌಕರರಿಗೆ ದೊರೆತಿದೆ. ಈ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಯಾವುದೇ ಒತ್ತಡಕ್ಕೆ ಮಣಿಯದೆ ಆತ್ಮಸಾಕ್ಷಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು.

ರಾಜ್ಯದ 750 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆದ ಈ ಸಂವಾದ ಕಾರ್ಯಕ್ರಮದಲ್ಲಿ ಸುಮಾರು 2.50 ಲಕ್ಷ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರು ಭಾಗವಹಿಸಿದ್ದರು.

ಭ್ರಷ್ಟರ ಬೇಟೆ

Recent Posts

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

33 minutes ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

34 minutes ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

35 minutes ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

1 day ago