Latest

ಇಂಡೋನೇಷ್ಯಾದಲ್ಲಿ ಪ್ರಭಲ ಭೂಕಂಪ; 44 ಜನ ಸಾವು, ಕನಿಷ್ಠ 300 ಮಂದಿಗೆ ಗಾಯ!

ಇಂಡೋನೇಷ್ಯಾದ ಪಶ್ಚಿಮ ಜಾವಾ ದ್ವೀಪದಲ್ಲಿ ಸೋಮವಾರ ಭಾರಿ ಭೂಕಂಪ ಸಂಭವಿಸಿದೆ. ಸಾಸಿಯಾಜೂರ್ ಪ್ರದೇಶದಲ್ಲಿ 49 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ್ದು, ಈ ಭೂಕಂಪದಲ್ಲಿ ಕನಿಷ್ಠ 44 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 300 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 6.9 ರಿಂದ 5.6 ರ ನಡುವೆ ಇತ್ತು. ಭೂಕಂಪದಿಂದಾಗಿ ಸಾವಿರಾರು ಮನೆಗಳು ಬುಡಸಮೇತ ಕಿತ್ತುಹೋಗಿವೆ. ಕಟ್ಟಡಗಳು ಕುಸಿಸಿದ್ದು, ಒಂದು ಶಾಲೆ ನಾಶವಾಗಿದೆ. ಜನರು ಭಯಭೀತರಾಗಿ ರಸ್ತೆಗಳಿಗೆ ಧಾವಿಸಿದ್ದಾರೆ. ಜಾಗೃತ ಅಧಿಕಾರಿಗಳು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನ ಪ್ರಾರಂಭಿಸಿದರು. ಇನ್ನೂ ಕೆಲವರು ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago