Categories: CrimeLatest

ಡ್ರೈವರ್ ಸಹವಾಸ, ಗಂಡು ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಪೋಕ್ಸೋ ಪ್ರಕರಣ ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ.

ಮಾಹಿತಿಯ ಪ್ರಕಾರ, ಹಾಸ್ಟೆಲ್‌ನಲ್ಲಿ ವಾಸವಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ, ತಾಲ್ಲೂಕಿನ ಕರಿಯಣ್ಣ ಎಂಬ ಚಾಲಕನ ಪರಿಚಯವಾಗಿ ಪ್ರೀತಿಯ ಸಂಬಂಧ ಬೆಳೆಸಿಕೊಂಡಿದ್ದಳು. ಈ ಸಂಬಂಧದ ಪರಿಣಾಮವಾಗಿ ಆಕೆ ಗರ್ಭಿಣಿಯಾಗಿದ್ದಳು ಎನ್ನಲಾಗಿದೆ.

ನಿನ್ನೆ ಬಾಲಕಿಯ ತಾಯಿ ಆಕೆಯನ್ನು ಹಾಸ್ಟೆಲ್‌ನಿಂದ ಕರೆದುಕೊಂಡು ಬಂದು ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿದ್ದಾರೆ. ಹೆರಿಗೆಯ ವೇಳೆ ಬಾಲಕಿ ಅಪ್ರಾಪ್ತೆ ಎಂಬುದು ತಿಳಿದ ಆಸ್ಪತ್ರೆ ಸಿಬ್ಬಂದಿ ಕೂಡಲೇ ಸಮಾಜ ಕಲ್ಯಾಣ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಹಿರಿಯೂರು ನಗರ ಠಾಣೆ ಪೊಲೀಸರು ತನಿಖೆ ಆರಂಭಿಸಿ, ಆರೋಪಿ ಕರಿಯಣ್ಣ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಇದೇ ವೇಳೆ ಅಪ್ರಾಪ್ತ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಖಿ ಕೇಂದ್ರಕ್ಕೆ ಸ್ಥಳಾಂತರಿಸಿ ಅಗತ್ಯ ಆರೈಕೆ ಹಾಗೂ ಕೌನ್ಸೆಲಿಂಗ್ ವ್ಯವಸ್ಥೆ ಮಾಡಲಾಗಿದೆ. ಪ್ರಕರಣದ ಕುರಿತು ಹಿರಿಯೂರು ನಗರ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

9 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

9 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

4 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

4 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

4 days ago