Categories: Latest

ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಛತೆ: ಹೊಸೂರು ಕೆಪಿಎಸ್ ಶಾಲೆಯ ವಿಡಿಯೋ ವೈರಲ್; ಪೋಷಕರ ಆಕ್ರೋಶ

ಗೌರಿಬಿದನೂರು: ತಾಲ್ಲೂಕಿನ ಹೊಸೂರು ಗ್ರಾಮದ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಯಲ್ಲಿ ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ಆರೋಪ ಕೇಳಿಬಂದಿದ್ದು, ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಶಾಲಾ ಆಡಳಿತದ ವಿರುದ್ಧ ಪೋಷಕರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಶಾಲೆಯ ಆವರಣದ ಪಕ್ಕದಲ್ಲಿರುವ ಶೌಚಾಲಯವನ್ನು ಓರ್ವ ವಿದ್ಯಾರ್ಥಿ ಸ್ವಚ್ಛಗೊಳಿಸುತ್ತಿರುವುದು ಕಂಡುಬಂದಿದೆ. ಮತ್ತಿಬ್ಬರು ವಿದ್ಯಾರ್ಥಿಗಳು ಪೈಪ್ ಮೂಲಕ ನೀರು ಹಾಕುತ್ತಿರುವ ದೃಶ್ಯವೂ ವಿಡಿಯೋದಲ್ಲಿದೆ. ಈ ದೃಶ್ಯಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಣದ ಗುಣಮಟ್ಟದ ಕುರಿತು ಪೋಷಕರಲ್ಲಿ ಆತಂಕ ಮೂಡಿಸಿದೆ.

ಮಕ್ಕಳನ್ನು ಉತ್ತಮ ಶಿಕ್ಷಣ ಪಡೆಯಲು ಶಾಲೆಗೆ ಕಳುಹಿಸಲಾಗುತ್ತದೆ. ಆದರೆ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುವಂತಹ ಕೆಲಸಗಳನ್ನು ಮಾಡಿಸುವುದು ಸೂಕ್ತವಲ್ಲ ಎಂದು ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ಇಂತಹ ಘಟನೆಗಳು ನಡೆಯದಂತೆ ಮುಖ್ಯ ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿತ್ತು ಎಂದು ಅವರು ಹೇಳಿದ್ದಾರೆ.

ಶಾಲೆಗಳಿಗೆ ಸರ್ಕಾರದಿಂದ ವಿವಿಧ ಮೂಲಗಳ ಮೂಲಕ ಅನುದಾನ ಹಾಗೂ ಸೌಲಭ್ಯಗಳು ದೊರೆಯುತ್ತಿದ್ದು, ಶೌಚಾಲಯಗಳ ಸ್ವಚ್ಛತೆ ಸೇರಿದಂತೆ ಮೂಲಸೌಕರ್ಯಗಳ ನಿರ್ವಹಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿಗಳನ್ನು ಇಂತಹ ಕೆಲಸಗಳಿಗೆ ಬಳಸಿಕೊಳ್ಳುವ ಬದಲು ಅಗತ್ಯವಿದ್ದಲ್ಲಿ ಸ್ವಚ್ಛತಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುವ ಕೆಲಸ ಮಾಡಿಸಿರುವುದು ನಿಜವಾಗಿದ್ದರೆ, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸಮಗ್ರವಾಗಿ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ಪಡೆಯಲು ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕ ಗಂಗಾಧರಯ್ಯ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಕರೆ ಸ್ವೀಕರಿಸಲಿಲ್ಲ.

ಅಧಿಕಾರಿಗಳಿಂದ ಪರಿಶೀಲನೆ

ಘಟನೆ ಕುರಿತು ಪ್ರತಿಕ್ರಿಯಿಸಿರುವ ಪ್ರಭಾರ ಬಿಇಒ ಗಂಗಾ ರೆಡ್ಡಿ, “ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳಿಂದ ಇಂತಹ ಕೆಲಸ ಮಾಡಿಸುವುದು ತಪ್ಪು. ಘಟನೆ ನಡೆದಿರುವ ಕುರಿತು ಪರಿಶೀಲನೆ ನಡೆಸಲು ತಂಡವನ್ನು ಕಳುಹಿಸಲಾಗಿದೆ. ಘಟನೆಯ ಬಗ್ಗೆ ಮುಖ್ಯ ಶಿಕ್ಷಕರಿಗೆ ನೋಟಿಸ್ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ಕುರಿತು ಶಿಕ್ಷಣ ಇಲಾಖೆ ಕೈಗೊಳ್ಳಲಿರುವ ಮುಂದಿನ ಕ್ರಮದತ್ತ ಇದೀಗ ಪೋಷಕರು ಹಾಗೂ ಸಾರ್ವಜನಿಕರು ಗಮನಹರಿಸಿದ್ದಾರೆ.

ವರದಿ: ಅವಿನಾಶ್

ಭ್ರಷ್ಟರ ಬೇಟೆ

Recent Posts

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

4 hours ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

9 hours ago

₹20 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ!

ಹಾವೇರಿ: ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಕೊಡಲು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಅಧಿಕಾರಿಯೊಬ್ಬರು ಲೋಕಾಯುಕ್ತ…

9 hours ago

ವಿವಾಹಿತ ಮಹಿಳೆ ಜೊತೆ ಬಾಯ್‌ಫ್ರೆಂಡ್‌ ಪರಾರಿ? ಕಣ್ಣೀರಿಟ್ಟ ದೆಹಲಿ ಬ್ಲಾಗರ್; “ನನ್ನನ್ನು ಬಿಟ್ಟು ಆಕೆಯಲ್ಲೇನಿತ್ತು?”

ನವದೆಹಲಿ: ತನ್ನ ಪ್ರಿಯಕರ ಮತ್ತೊಬ್ಬ ಮಹಿಳೆಯೊಂದಿಗೆ ತೆರಳಿದ್ದಾನೆ ಎಂದು ಆರೋಪಿಸಿ ದೆಹಲಿ ಮೂಲದ ಖ್ಯಾತ ಬ್ಲಾಗರ್ ಶ್ವೇತಾ ದ್ವಿವೇದಿ ಸಾಮಾಜಿಕ…

9 hours ago

ನಕಲಿ ಮಾಲೀಕರನ್ನು ನಿಲ್ಲಿಸಿ ₹1.08 ಕೋಟಿ ಮೌಲ್ಯದ ಜಮೀನು ಮಾರಾಟ: ನಾಲ್ವರ ವಿರುದ್ಧ FIR

ಬಳ್ಳಾರಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ಜಮೀನು ಮಾಲೀಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಸುಮಾರು ₹1.08 ಕೋಟಿ ಮೌಲ್ಯದ ಜಮೀನನ್ನು ವಂಚನೆಯಿಂದ…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಮುಂದುವರಿಕೆ; ವಿಚಾರಣೆಯಲ್ಲಿ ಸ್ಫೋಟಕ ಅಂಶಗಳ ಉಲ್ಲೇಖ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಮಹತ್ವದ ಹಂತ ತಲುಪಿದೆ. ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಮಾಫಿ…

1 day ago