Categories: Latest

ರಾಂಪೂರ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಬದಲಾವಣೆಗೆ ವಿದ್ಯಾರ್ಥಿಗಳ ಪಟ್ಟು

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ರಾಂಪೂರ (ಆರ್.ಸಿ) ಗ್ರಾಮದಲ್ಲಿ ಇಂದು ವಿದ್ಯಾರ್ಥಿಗಳು ಅತಿಥಿ ಉಪನ್ಯಾಸಕರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆ ವಿಷಯ ತಿಳಿದು ನಮ್ಮ ವರದಿಗಾರರು ಕಾಲೇಜಿಗೆ ಭೇಟಿ ನೀಡಿ ಪ್ರತಿಭಟನೆ ಕುರಿತು ವಿದ್ಯಾರ್ಥಿಗಳನ್ನು ಕೇಳಿದಾಗ ವಿದ್ಯಾರ್ಥಿಗಳು ಹಲವಾರು ಸಮಸ್ಯೆಗಳ ಪಟ್ಟಿಯನ್ನು ಅತಿಥಿ ಉಪನ್ಯಾಸಕರ ಕುರಿತು ತಿಳಿಸಿದ್ದಾರೆ. ಈ 2026-27 ನೇ ಶೈಕ್ಷಣಿಕ ಸಾಲಿನಲ್ಲಿ ಮೂರು ವಿಷಯಗಳಿಗೆ ಮೂವರು ಅತಿಥಿ ಉಪನ್ಯಾಸಕರು ಈ ಕಾಲೇಜಿನಲ್ಲಿ ನೇಮಕಗೊಂಡಿದ್ದಾರೆ.
ಆದರೆ ಎರಡು ವಿಷಯಗಳಾದ ಅರ್ಥಶಾಸ್ತ್ರ ಮತ್ತು ಸಮಾಜ ಶಾಸ್ತ್ರ ವಿಷಯಗಳ ಶಿಕ್ಷಕರು ಹೇಳಿದ ಪಾಠ ಬೋಧನೆ ಯಾವುದೇ ವಿದ್ಯಾರ್ಥಿಗಳಿಗೆ ಅರ್ಥವಾಗುತ್ತಿಲ್ಲವೆಂದು ತಮ್ಮ ವೇದನೆಯನ್ನು ಹಂಚಿಕೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಅರ್ಥಶಾಸ್ತ್ರದ ಅತಿಥಿ ಶಿಕ್ಷಕರು ಬಾಯಿಗೆ ಬಂದಂತೆ ಬೈಯುತ್ತಾರೆ ಹಾಗೂ ಅವರ ವರ್ತನೆಗಳು ಸರಿ ಇಲ್ಲವೆಂದು ತಿಳಿಸಿದ್ದಾರೆ. ಹೀಗಾಗಿ ಈ ಮೊದಲಿದ್ದ ಅತಿಥಿ ಉಪನ್ಯಾಸಕರನ್ನೆ ಮುಂದುವರೆಸಿ ಇದೀಗ ಹೊಸದಾಗಿ ನೇಮಕಗೊಂಡ ಅತಿಥಿ ಉಪನ್ಯಾಸಕರು ನಮಗೆ ಬೇಡವೆಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಅಷ್ಟೇ ಅಲ್ಲದೆ ಈ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಕೆಲವರು ಶಿಕ್ಷಕರು ಟಾರ್ಗೆಟ್ ಮಾಡಿ ಬೈಯುತ್ತಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಈ ವಿಷಯದ ಕುರಿತು ಕಾಲೇಜಿನ ಪ್ರಾಂಶುಪಾಲರಾದ ಎಸ್.ಎಸ್.ಮೇಟಿಯವರಿಗೆ ಕೇಳಿದಾಗ ಅತಿಥಿ ಉಪನ್ಯಾಸಕರ ನೇಮಕಾತಿ ಮೆರಿಟ್ ಆಧಾರದ ಮೇಲೆ ನಡೆಯುವುದರಿಂದ ಈಗಿರುವ ಅತಿಥಿ ಉಪನ್ಯಾಸಕರಿಗೆ ಅನುಭವ ಕಮ್ಮಿ ಇದ್ದು ಈ ರೀತಿ ಸಮಸ್ಯೆಯಾಗಿದೆ ಎಂದು ತಿಳಿಸಿದ್ದಾರೆ. ಆದರೂ ಸಹ ವಿದ್ಯಾರ್ಥಿಗಳಿಂದ ಲಿಖಿತವಾಗಿ ಸಮಸ್ಯೆಗಳ ಕುರಿತು ಅರ್ಜಿಯನ್ನು ಪಡೆದುಕೊಂಡಿದ್ದೇವೆ ಅದನ್ನು ನಮ್ಮ ಮೇಲಾಧಿಕಾರಿಗಳಿಗೆ ಕಳುಹಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುತ್ತೇವೆ ಎಂದು ವರದಿಗಾರರಿಗೆ ತಿಳಿಸಿದ್ದಾರೆ.
ಈ ವಿಷಯದ ಕುರಿತು ಜಿಲ್ಲೆಯ ಕಾಲೇಜುಗಳ ಉಪ ನಿರ್ದೇಶಕರಾದ ಪುಂಡಲೀಕ ಕಾಂಬಳೆ ಯವರ ಜೊತೆ ವರದಿಗಾರರು ಕರೆ ಮೂಲಕ ಮಾತನಾಡಿದಾಗ ವಿದ್ಯಾರ್ಥಿಗಳಿಗೆ ವಿಷಯ ಅರ್ಥವಾಗಿಲ್ಲವೆಂದರೆ ಹಾಗೂ ಅತಿಥಿ ಶಿಕ್ಷಕರ ವರ್ತನೆಗಳು ಸರಿ ಇಲ್ಲ ಎಂಬ ಆರೋಪಗಳು ಕಂಡು ಬಂದಲ್ಲಿ, ವಿದ್ಯಾರ್ಥಿಗಳ ಅಭಿಪ್ರಾಯ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳ ಹೇಳಿಕೆಯ ಆಧಾರದ ಮೇಲೆ ಪ್ರಾಂಶುಪಾಲರು ಅಂತವರನ್ನು ತೆಗೆದುಹಾಕಲು ಅವಕಾಶವಿದೆ ಎಂದಿದ್ದಾರೆ.
ಆದರೆ ಇದೇ ಮಾಹಿತಿಯನ್ನು ಕಾಲೇಜಿನ ಪ್ರಾಂಶುಪಾಲರಿಗೆ ತಿಳಿಸಿದಾಗ ಅತಿಥಿ ಶಿಕ್ಷಕರನ್ನು ನಾವು ತೆಗೆದುಹಾಕಲು ಆಗುವುದಿಲ್ಲ ನಮ್ಮ ಮೇಲಾಧಿಕಾರಿಗಳಿಗೆ ಮಾತ್ರ ತೆಗೆದುಹಾಕಲು ಅವಕಾಶವಿದೆ ಎಂದು ಹೇಳಿದ್ದಾರೆ. ಒಟ್ಟಾರೆಯಾಗಿ ಈ ವಿಷಯದಲ್ಲಿ ಒಬ್ಬರಿಗೊಬ್ಬರ ಮೇಲೆ ಜಾರಿಕೊಳ್ಳುವುದನ್ನು ಬಿಟ್ಟು ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಉತ್ತಮ ಶಿಕ್ಷಕರ ನೇಮಕಾತಿಗೆ ಅವಕಾಶ ಮಾಡಿಕೊಡಬೇಕು.

ಈಗಾಗಲೇ ಈ ವಿಷಯವು ಮಾನ್ಯ ಉಪ ನಿರ್ದೇಶಕರ ಗಮನಕ್ಕೆ ಬಂದಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗೆ ಯಾವ ರೀತಿಯ ಪರಿಹಾರ ಒದಗಿಸಿ ಕೊಡುತ್ತಾರೆ ಎಂದು ಕಾದು ನೋಡಬೇಕಿದೆ.

ವರದಿ: ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

44 seconds ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

5 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

20 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago