ಬಸವನ ಬಾಗೇವಾಡಿ ತಾಲ್ಲೂಕಿನ ಸರಕಾರಿ ಕಸ್ತೂರ ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಕಾಮನಕೇರಿಯಲ್ಲಿ ವಿದ್ಯಾರ್ಥಿಗಳು ಸುಮಾರು ಒಂದು ವಾರದಿಂದ ಕುಡಿಯುವ ಹಾಗೂ ಬಳಕೆಗೆ ನೀರಿನ ಸಮಸ್ಯೆ ಎದುರಿಸುತ್ತಿದ್ದು ಯಾವೊಬ್ಬ ಅಧಿಕಾರಿಯೂ ಇತ್ತ ಗಮನ ಹರಿಸದೆ ಇರುವುದು ಶೋಚನೀಯ. ವಸತಿ ನಿಲಯದಲ್ಲಿ ಸುಮಾರು 142 ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು,ಅದರಲ್ಲಿ ವಿಶೇಷವಾಗಿ ಬಡ ಮಕ್ಕಳು,ಅನಾಥ ಮಕ್ಕಳು, ದೇವದಾಸಿಯ ರ ಮಕ್ಕಳು ಹಾಗೂ ವಲಸೆ ಹೋದ ಮಕ್ಕಳು ಸುಮಾರು 10 ವರ್ಷ ಮೇಲ್ಪಟ್ಟು ಮತ್ತು 14 ವರ್ಷದ ಒಳಗಿನ 6 ರಿಂದ 9 ನೆಯ ತರಗತಿಯ ವಿದ್ಯಾರ್ಥಿಗಳು ವಾಸವಿದ್ದು ಮೊದಲಿಗೆ ಇದ್ದ ಬೋರ್ ವೆಲ್ ನ ನೀರು ಸಂಪೂರ್ಣ ಕಡಿಮೆಯಾಗಿದ್ದು. ಪ್ರತಿ ದಿನ ಮಕ್ಕಳಿಗೆ ಸ್ನಾನ ಮಾಡಲು, ಬಟ್ಟೆ ತೊಳೆಯಲು, ಅಡುಗೆ ಮಾಡಲು ಹಾಗೂ ವಿದ್ಯಾರ್ಥಿಗಳು ದಿನ ನಿತ್ಯ ಕುಡಿಯಲು ಸರಿಯಾಗಿ ನೀರಿನ ವ್ಯವಸ್ಥೆ ಇಲ್ಲದೆ ಇರುವುದು ಕಂಡು ಬಂದಿರುತ್ತದೆ. ಇದರ ಬಗ್ಗೆ ಹಲವು ಬಾರಿ ಶಾಲಾ ಮಕ್ಕಳಿಗೆ ಬೋರ್ ವೆಲ್ ವ್ಯವಸ್ಥೆ ಕಲ್ಪಿಸಲು ಹಲವು ಬಾರಿ ಗುರುಮಾತೆಯರು ಮನವಿ ಮಾಡಿಕೊಂಡಿದ್ದರು ಸಹ ಯಾವುದೇ ಪ್ರಯೋಜನ ಇನ್ನುವರೆಗೂ ಆಗಿರುವುದಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ವಸತಿ ನಿಲಯಕ್ಕೆ ಬೇಟಿ ಕೊಟ್ಟು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು ಎಂಬುದು ಪತ್ರಿಕೆಯ ಆಶಯವಾಗಿದೆ.
ವರದಿ:ಸಂಗಪ್ಪ ಚಲವಾದಿ
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…