ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಯಲು ಇಲಾಖೆಯು ಜುಲೈ 2024ರಿಂದ ನಿರಂತರ ಜಾರಿ ಕಾರ್ಯಾಚರಣೆಗಳನ್ನು ಕೈಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 31 ಘೋರ ಪ್ರಕರಣಗಳನ್ನು ದಾಖಲಿಸಲಾಗಿದೆ. ಒಟ್ಟಾರೆ ₹9.31 ಕೋಟಿ ಮೌಲ್ಯದ ಅಕ್ರಮ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.
ವಶಪಡಿಸಿಕೊಳ್ಳಲಾದ ವಸ್ತುಗಳು:
115.350 ಲೀ. ಗೋವಾ ಮದ್ಯ
47.250 ಲೀ. ಡಿಫೆನ್ಸ್ ಮದ್ಯ
140.940 ಲೀ. ಅಕ್ರಮ ಮದ್ಯ
56.570 ಲೀ. ಬಿಯರ್
244.920 ಲೀ. ವೈನ್
115 ಲೀ. ಶೇಂದಿ
92 ಲೀ. ಬೆಲ್ಲದ ಕೊಳೆ
64.750 ಲೀ. ಕಳ್ಳಬಟ್ಟಿ
4 ವಾಹನಗಳು
ಒಟ್ಟು 876.780 ಲೀ. ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ಅಕ್ರಮ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳು:
ಅಬಕಾರಿ ಇಲಾಖೆಯು ಅಕ್ರಮ ಮದ್ಯ ಸರಬರಾಜನ್ನು ತಡೆಯಲು ಸಮರ್ಥ ಕ್ರಮಗಳನ್ನು ತೆಗೆದುಕೊಂಡಿದೆ. ಮದುವೆ, ಸಭೆ, ಸಮಾರಂಭಗಳಲ್ಲಿ ಮದ್ಯ ಸರಬರಾಜು ಮಾಡಲು ನೀಡುವ ಸಾಂದರ್ಭಿಕ CL-5 ಪರವಾನಗಿಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲಾಗುತ್ತಿದೆ. 2023-24ನೇ ಸಾಲಿನಲ್ಲಿ ಏಪ್ರಿಲ್ ರಿಂದ 2024ರ ಜನವರಿ 15ರ ವರೆಗೆ 432 CL-5 ಪರವಾನಗಿಗಳನ್ನು ನೀಡಲಾಗಿದ್ದು, ಏಪ್ರಿಲ್ 2024ರಿಂದ 2025ರ ಜನವರಿ 15ರ ವರೆಗೆ 865 ಪರವಾನಗಿಗಳನ್ನು ಮಂಜೂರು ಮಾಡಲಾಗಿದೆ.
ಸಮಾಜಕ್ಕೆ ತೊಂದರೆ ಇಲ್ಲದಂತೆ ಜಾರಿಗೆ ಕ್ರಮ:
ಸಮಾಜದ ಶಾಂತಿ ಕದಡುವಂತಿಲ್ಲದೆ ಅಧಿಕಾರಿಗಳು ಸಮವಸ್ತ್ರ ಧರಿಸದೇ ಸಭೆ, ಸಮಾರಂಭಗಳಿಗೆ ಭೇಟಿ ನೀಡಿ, ಅನಧಿಕೃತ ಮದ್ಯ ಸರಬರಾಜನ್ನು ತಡೆಯುತ್ತಿದ್ದಾರೆ. ಗೋವಾ ಮತ್ತು ಡಿಫೆನ್ಸ್ ಮದ್ಯದ ಅಕ್ರಮ ಪೂರೈಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲಾಗಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.
ಅಬಕಾರಿ ಇಲಾಖೆಯ ಈ ನಿಗಾ ಕ್ರಮಗಳಿಂದ ಅಕ್ರಮ ಮದ್ಯ ವ್ಯಾಪಾರ ತೀವ್ರವಾಗಿ ಕಡಿಮೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಸಜ್ಜಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…