ಮುಂಡಗೋಡ: ತಾಲೂಕಿನ ಮುಡಸಾಲಿ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮುಂಡಗೋಡ(ಶೈ ಜಿಲ್ಲೆ ಶಿರಸಿ) ಸಮೂಹ ಸಂಪನ್ಮೂಲ ಕೇಂದ್ರ ಚಿಗಳ್ಳಿ ಇವರುಗಳ ಸಂಯುಕ್ತಾಶ್ರಯದಲ್ಲಿ 2022-23 ನೇ ಸಾಲಿನ ಚಿಗಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಕಾತೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ರೇಣುಕಾ ಮಾಯಣ್ಣನವರ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಕಾತೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಶಿವಾಜಿ ಶಿಂದೆ ಭಾಗವಹಿಸಿದ್ದರು.ಸಿ ಆರ್ ಪಿ ಪ್ರಶಾಂತ್ ಸಾವಳಗಿ ಮಾತನಾಡಿ ಶಾಲಾ ಹಂತದಿಂದಲೇ ಮಕ್ಕಳಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಪೋಷಸಿಲು ಇಂತಹ ಕಾರ್ಯಕ್ರಮಗಳು ಅವಶ್ಯವಾಗಿದ್ದು ಇದನ್ನು ನಮ್ಮ ಇಲಾಖೆ ಮಾಡುತ್ತಿದೆ ಎಂದರು.
ಮುಖ್ಯಾಧ್ಯಾಪಕರಾದ ನಾಗರಾಜ ಕಾಮನಳ್ಳಿ ಅವರು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಹನಮಂತಪ್ಪ ಬೆಡಸಗಾಂವ ಅವರ ಸ್ಮರಣಾರ್ಥ ಶಾಲೆಗೆ ಸ್ಮಾರ್ಟ್ ಟಿವಿಯನ್ನು ದೇಣಿಗೆ ನೀಡಿದ ಕುಟುಂಬದವರಾದ ಶ್ರೀಮತಿ ಶಾಂತವ್ವ ಹನಮಂತಪ್ಪ ಬೆಡಸಗಾಂವ ಅವರನ್ನು ಸನ್ಮಾನಿಸಲಾಯಿತು.
ಊರಿನ ಹಿರಿಯರಾದ ನಿಂಗಪ್ಪ ಟೋಪೋಜಿ ಮಾತನಾಡಿದರು.
ಇಂತಹ ಕಾರ್ಯಕ್ರಮಗಳನ್ನು ಇಲಾಖೆಯಿಂದ ಬರುವ ಅನುದಾನದಲ್ಲಿ ವಿಜೃಂಭಣೆಯಿಂದ ಮಾಡುವುದು ಕಷ್ಟಸಾಧ್ಯ ಆದರೆ ಇಲ್ಲಿ ಊರಿನ ನಾಗರಿಕರೆಲ್ಲರೂ ಕೂಡಿ ತನು ಮನ ಧನ ಸಹಾಯದೊಂದಿಗೆ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದು ವಿಶೇಷವಾಗಿತ್ತು.
ಶಿಕ್ಷಕರಾದ ವೀರಯ್ಯ ಕುರಟ್ಟಿಮಠ ನಿರೂಪಿಸಿದರು,ಶಿಕ್ಷಕಿ ನಾಗರತ್ನಮ್ಮ ವಂದಿಸಿದರು.
ವರದಿ: ಮಂಜುನಾಥ ಹರಿಜನ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…