Latest

ಮಕ್ಕಳಲ್ಲಿನ ಪ್ರತಿಭೆ ಗುರುತಿಸಲು ಇಂತಹ ಕಾರ್ಯಕ್ರಮಗಳು ಅವಶ್ಯ: ಸಿ. ಆರ್. ಪಿ ಸಾವಳಗಿ

ಮುಂಡಗೋಡ:  ತಾಲೂಕಿನ ಮುಡಸಾಲಿ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮುಂಡಗೋಡ(ಶೈ ಜಿಲ್ಲೆ ಶಿರಸಿ) ಸಮೂಹ ಸಂಪನ್ಮೂಲ ಕೇಂದ್ರ ಚಿಗಳ್ಳಿ ಇವರುಗಳ ಸಂಯುಕ್ತಾಶ್ರಯದಲ್ಲಿ 2022-23 ನೇ ಸಾಲಿನ ಚಿಗಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಕಾತೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ರೇಣುಕಾ ಮಾಯಣ್ಣನವರ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಕಾತೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಶಿವಾಜಿ ಶಿಂದೆ ಭಾಗವಹಿಸಿದ್ದರು.ಸಿ ಆರ್ ಪಿ ಪ್ರಶಾಂತ್ ಸಾವಳಗಿ ಮಾತನಾಡಿ ಶಾಲಾ ಹಂತದಿಂದಲೇ ಮಕ್ಕಳಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಪೋಷಸಿಲು ಇಂತಹ ಕಾರ್ಯಕ್ರಮಗಳು ಅವಶ್ಯವಾಗಿದ್ದು ಇದನ್ನು ನಮ್ಮ ಇಲಾಖೆ ಮಾಡುತ್ತಿದೆ ಎಂದರು.
ಮುಖ್ಯಾಧ್ಯಾಪಕರಾದ ನಾಗರಾಜ ಕಾಮನಳ್ಳಿ ಅವರು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಹನಮಂತಪ್ಪ ಬೆಡಸಗಾಂವ ಅವರ ಸ್ಮರಣಾರ್ಥ ಶಾಲೆಗೆ ಸ್ಮಾರ್ಟ್ ಟಿವಿಯನ್ನು ದೇಣಿಗೆ ನೀಡಿದ ಕುಟುಂಬದವರಾದ ಶ್ರೀಮತಿ ಶಾಂತವ್ವ ಹನಮಂತಪ್ಪ ಬೆಡಸಗಾಂವ ಅವರನ್ನು ಸನ್ಮಾನಿಸಲಾಯಿತು.
ಊರಿನ ಹಿರಿಯರಾದ ನಿಂಗಪ್ಪ ಟೋಪೋಜಿ ಮಾತನಾಡಿದರು.
ಇಂತಹ ಕಾರ್ಯಕ್ರಮಗಳನ್ನು ಇಲಾಖೆಯಿಂದ ಬರುವ ಅನುದಾನದಲ್ಲಿ ವಿಜೃಂಭಣೆಯಿಂದ ಮಾಡುವುದು ಕಷ್ಟಸಾಧ್ಯ ಆದರೆ ಇಲ್ಲಿ ಊರಿನ ನಾಗರಿಕರೆಲ್ಲರೂ ಕೂಡಿ ತನು ಮನ ಧನ ಸಹಾಯದೊಂದಿಗೆ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದು ವಿಶೇಷವಾಗಿತ್ತು.
ಶಿಕ್ಷಕರಾದ ವೀರಯ್ಯ ಕುರಟ್ಟಿಮಠ ನಿರೂಪಿಸಿದರು,ಶಿಕ್ಷಕಿ ನಾಗರತ್ನಮ್ಮ ವಂದಿಸಿದರು.
ವರದಿ: ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆ ಸೇರಿ ವ್ಯಕ್ತಿಯ ಕೊಲೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್

ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…

5 hours ago

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ತೊಂದರೆ ಆಗಿದೆ: ಅರ್ಹರಿಗೆ ಮಾತ್ರ ಸೌಲಭ್ಯ ನೀಡಲು ಪರಿಷ್ಕರಣೆ – ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…

5 hours ago

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

19 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

1 day ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

3 days ago