Latest

“ಸುಧಾಮೂರ್ತಿ ಅವರ ಆಸ್ತಿ ಜಗದಗಲ, ತಿಳುವಳಿಕೆ ಚಮಚದಗಲ” -ನಟ ಚೇತನ್‌ ಟೀಕೆ

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಇತ್ತೀಚೆಗೆ ‘ಖಾನೆ ಮೇ ಕ್ಯಾ ಹೈ’ ಯೂಟ್ಯೂಬ್ ಚಾನೆಲ್‌ನ ‘ಖಾನೆ ಮೇ ಕೌನ್ ಹೇ’ ಎಂಬ ಸಂಚಿಕೆಯಲ್ಲಿ ಕಾಣಿಸಿಕೊಂಡಿದ್ದರು. ಆ ವೇಳೆ ತಮ್ಮ ಆಹಾರ ಕ್ರಮದ ರೀತಿ, ನೀತಿಗಳ ಬಗ್ಗೆ ಮಾತನಾಡಿದ್ದರು. ಇನ್ನು ಅದೇ ವೇಳೆ ಸುಧಾ ಮೂರ್ತಿ ಅವರು ನೀಡಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ವಿಚಾರವಾಗಿ ನಟ ಚೇತನ್‌ ಅಹಿಂಸಾ ಅವರು ನೇರವಾಗಿ ಸುಧಾಮೂರ್ತಿ ಅವರನ್ನು ಟ್ವೀಟ್‌ ಮೂಲಕ ಟೀಕಿಸಿದ್ದಾರೆ.
“ನಾನು ಶುದ್ಧ ಸಸ್ಯಾಹಾರಿ, ಮೊಟ್ಟೆ, ಈರುಳ್ಳಿ, ಬೆಳ್ಳುಳ್ಳಿ ಕೂಡ ಸೇವಿಸುವುದಿಲ್ಲ. ವಿದೇಶಕ್ಕೆ ಹೋಗುವಾಗ ತಮಗೆ ಬೇಕಾದ ಊಟ ತಿಂಡಿಯನ್ನು ರೆಡಿ ಮಾಡಿಕೊಂಡು ಬ್ಯಾಗ್ ನಲ್ಲಿ ಹಾಕಿಕೊಂಡು ಹೋಗುತ್ತೇನೆ. ಈ ಹೋಟೆಲ್‌ಗಳಲ್ಲಿ ಸಸ್ಯಾಹಾರ-ಮಾಂಸಾಹಾರ ಭಕ್ಷ್ಯಗಳಿಗೆ ಒಂದೇ ಚಮಚ ಬಳಸುವ ಬಗ್ಗೆ ನನ್ನ ಮನಸ್ಸಿಗೆ ತುಂಬಾ ಆತಂಕವಾಗುತ್ತದೆ. ಹೀಗಾಗಿ ವಿದೇಶಕ್ಕೆ ಹೋಗುವಾಗ ಸ್ಪೂನ್ ಕೂಡ ಜೊತೆಗೆ ತೆಗೆದುಕೊಂಡು ಹೋಗುತ್ತೇನೆ” ಎಂದು ಸುಧಾ ಮೂರ್ತಿ ಅವರು ಹೇಳಿರುವ ಮಾತು ಟ್ರೋಲ್ ಆಗುತ್ತಿದೆ.
ಇನ್ನು ಈ ಕುರಿತು ಟ್ವೀಟ್‌ ಮಾಡಿರುವ ನಟ ಚೇತನ್‌ “ಸುಧಾಮೂರ್ತಿಯವರು ನಮ್ಮ ಬ್ರಾಹ್ಮಣ್ಯ-ಬಂಡವಾಳಶಾಹಿ ಸಮಾಜದಿಂದ ಅತಿಯಾದ ಬಿಲ್ಡಪ್‌ನಿಂದ ಗುರುತಿಸಲ್ಪಟ್ಟ ಮತ್ತು ಅನರ್ಹವಾಗಿ ಗೌರವಿಸಲ್ಪಟ್ಟ ಸಾರ್ವಜನಿಕ ವ್ಯಕ್ತಿ” ಮುಂದುವರಿದು, “ಅವರು ತನ್ನ ಸೀಮಿತ, ಮಡಿವಂತಿಕೆಯ ಚಿಂತನೆಯನ್ನು ಬಹಿರಂಗಪಡಿಸುವ ಹೇಳಿಕೆಗಳನ್ನು ನಿರಂತರವಾಗಿ ಮಾಡುತ್ತಾರೆ. ಸುಧಾಮೂರ್ತಿಯವರು ಹೆಚ್ಚು ಮಾತನಾಡಬೇಕು; ಅವರ ಆಸ್ತಿ ಜಗದಗಲ -ತಿಳಿವಳಿಕೆ ಚಮಚದಗಲ!” ಎಂದು ಟೀಕಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago