ಧಾರವಾಡ: ಆನ್‌ಲೈನ್ ಗೇಮ್ ಚಟದಿಂದ ಹಣ ಕಳೆದುಕೊಂಡ ನೋವಿನಿಂದ ಐಐಟಿ ಧಾರವಾಡದ ಸ್ಟಾಫ್ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಗರಗ ಗ್ರಾಮದ ನಿವಾಸಿ ನಾಗರಾಜ್ ಶಿವಪ್ಪ ಉಳವಣ್ಣವರ (30) ತಮ್ಮ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ಆನ್‌ಲೈನ್ ಗೇಮಿಂಗ್‌ಗೆ ಆಕರ್ಷಿತರಾಗಿ ಸುಮಾರು ₹20 ಲಕ್ಷಕ್ಕೂ ಹೆಚ್ಚು ಹಣ ನಷ್ಟಕ್ಕೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಈ ಆರ್ಥಿಕ ಸಂಕಟಕ್ಕೆ ಮನನೊಂದು ಅವರು ಕಠೋರ ನಿರ್ಧಾರಕ್ಕೆ ಮೊರೆಹೋದ ಸಾಧ್ಯತೆ ವ್ಯಕ್ತವಾಗಿದೆ.
ಘಟನೆ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಘಟನೆ ಆನ್‌ಲೈನ್ ಗೇಮಿಂಗ್‌ಗೆ ಸಂಬಂಧಿಸಿದ ಆತಂಕವನ್ನು ಮತ್ತೊಮ್ಮೆ ಎತ್ತಿ ತೋರಿಸಿದ್ದು, ಹಣ ಕಳೆದುಕೊಳ್ಳುವ ಭಯದಿಂದ ಇಂತಹ ದುರ್ಘಟನೆಗಳು ನಡೆಯುತ್ತಿರುವುದು ಕಳವಳಕಾರಿ ಬೆಳವಣಿಗೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…