Categories: CrimeLatest

ಚಿಕ್ಕೋಡಿಯಲ್ಲಿ ಹೋಟೆಲ್, ಢಾಬಾಗಳ ಮೇಲೆ ದಿಢೀರ್ ದಾಳಿ: 29 ಗೃಹಬಳಕೆ ಗ್ಯಾಸ್ ಸಿಲಿಂಡರ್ ಜಪ್ತಿ

ಚಿಕ್ಕೋಡಿ: ಪಟ್ಟಣದ ವಿವಿಧ ಹೋಟೆಲ್‌ಗಳು ಹಾಗೂ ಢಾಬಾಗಳಲ್ಲಿ ಅನಧಿಕೃತವಾಗಿ ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ವಿರುದ್ಧ ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿದ್ದು, ಒಟ್ಟು 29 ಸಿಲಿಂಡರ್‌ಗಳನ್ನು ಜಪ್ತಿ ಮಾಡಿದ್ದಾರೆ.

ಚಿಕ್ಕೋಡಿ ತಹಶೀಲ್ದಾರ್ ರಾಜೇಶ ಬುರ್ಲಿ ಅವರ ನೇತೃತ್ವದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಈ ದಾಳಿ ನಡೆಸಿದರು. ಸಬ್ಸಿಡಿ ದರದಲ್ಲಿ ದೊರೆಯುವ ಗೃಹಬಳಕೆ ಸಿಲಿಂಡರ್‌ಗಳನ್ನು ವ್ಯಾಪಾರಿಕ ಉದ್ದೇಶಗಳಿಗೆ ಅಕ್ರಮವಾಗಿ ಬಳಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ವಿವಿಧ ಹೋಟೆಲ್ ಹಾಗೂ ಢಾಬಾಗಳನ್ನು ಪರಿಶೀಲಿಸಲಾಯಿತು.

ಈ ವೇಳೆ ಕೆಲವು ಹೋಟೆಲ್ ಮತ್ತು ಢಾಬಾಗಳಲ್ಲಿ ನಿಯಮಬಾಹಿರವಾಗಿ ಗೃಹಬಳಕೆ ಸಿಲಿಂಡರ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದ್ದು, ಅಧಿಕಾರಿಗಳು ಅವುಗಳನ್ನು ಸ್ಥಳದಲ್ಲೇ ವಶಕ್ಕೆ ಪಡೆದರು.

ವಾಣಿಜ್ಯ ಸಿಲಿಂಡರ್ ಬಳಕೆಗೆ ಸೂಚನೆ

ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಕಾನೂನುಬಾಹಿರವಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ರಾಜೇಶ ಬುರ್ಲಿ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೆ, ಪಟ್ಟಣದ ಎಲ್ಲಾ ಹೋಟೆಲ್ ಮತ್ತು ಢಾಬಾ ಮಾಲೀಕರು ಕಡ್ಡಾಯವಾಗಿ ಅಧಿಕೃತ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳನ್ನೇ ಬಳಸಬೇಕು ಎಂದು ಅವರು ಸೂಚಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆ ಶಿರಸ್ತೆದಾರ ಹಣಮಂತ ಕಾಂಡೆಕರ ಹಾಗೂ ಆಹಾರ ನಿರೀಕ್ಷಕಿ ಐಶ್ವರ್ಯ ದಿವಟೆ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

19 hours ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

19 hours ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

19 hours ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

19 hours ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

19 hours ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

19 hours ago