Categories: CorruptionLatest

₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸರ್ವೇ ಅಧಿಕಾರಿ ಲೋಕಾಯುಕ್ತ ಬಲೆಗೆ; ಪರವಾನಗಿ ಪಡೆದ ಸರ್ವೆಯರ್‌ ಸಹ ಬಂಧನ

ಹರಿಹರ: ರೈತ ಮಹಿಳೆಯ ಜಮೀನಿನ ಸರ್ವೇ ಸ್ಕೆಚ್ ತಯಾರಿಸಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಹರಿಹರ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೇ ಸೂಪರ್‌ವೈಸರ್ ರಾಮಪ್ಪ ಅಡಿವೆಪ್ಪ ದಾಸರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ. ಇದೇ ಪ್ರಕರಣದಲ್ಲಿ ಸರ್ಕಾರದ ಪರವಾನಗಿ ಪಡೆದ ಸರ್ವೆಯರ್ ಆನಂದಪ್ಪ ಅವರನ್ನೂ ಬಂಧಿಸಲಾಗಿದೆ.

ಹರಿಹರ ತಾಲ್ಲೂಕಿನ ಜಿಗಳಿ ಗ್ರಾಮದ ರೈತ ಮಹಿಳೆ ಶೋಭಾ ಅವರು, ಸರ್ವೇ ನಂ. 68/3ರಲ್ಲಿ ಇರುವ ಜಮೀನಿನ 11ಇ ಸರ್ವೇ ಸ್ಕೆಚ್ ಸಿದ್ಧಪಡಿಸಿ ನೀಡುವಂತೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸಕ್ಕಾಗಿ ಸರ್ವೇ ಸೂಪರ್‌ವೈಸರ್ ರಾಮಪ್ಪ ದಾಸರ್ ₹6 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಲಂಚ ನೀಡಲು ನಿರಾಕರಿಸಿದ ಶೋಭಾ ಅವರು ತಮ್ಮ ಸಂಬಂಧಿ ಕೆ.ಪಿ. ರುದ್ರೇಶ್ ಅವರಿಗೆ ವಿಷಯ ತಿಳಿಸಿದ್ದು, ಅವರು ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಿದ್ದರು. ದೂರಿನ ಮೇರೆಗೆ ಲೋಕಾಯುಕ್ತ ಎಸ್ಪಿ ಕೌಲಪುರೆ ನೇತೃತ್ವದ ತಂಡ ಬಲೆ ಬೀಸಿ, ಶನಿವಾರ ಬೆಳಿಗ್ಗೆ ತಹಸೀಲ್ದಾರ್ ಕಚೇರಿ ಆವರಣದಲ್ಲಿ ರಾಮಪ್ಪ ದಾಸರ್ ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಧಿಸಿದೆ.

ತನಿಖೆ ವೇಳೆ ಸರ್ಕಾರದ ಪರವಾನಗಿ ಪಡೆದ ಸರ್ವೆಯರ್ ಆನಂದಪ್ಪ ಅವರು ತಮ್ಮ ಪತ್ನಿ ಸುನಿತಾ ಅವರ ಫೋನ್‌ಪೇ ಖಾತೆಗೆ ₹7 ಸಾವಿರ ವರ್ಗಾಯಿಸಿಕೊಳ್ಳುವ ಮೂಲಕ ಲಂಚ ಸ್ವೀಕರಿಸಿರುವುದು ಬೆಳಕಿಗೆ ಬಂದಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಲಂಚ ಸ್ವೀಕರಿಸಿದ ಆರೋಪದಡಿ ರಾಮಪ್ಪ ದಾಸರ್ ಹಾಗೂ ಆನಂದಪ್ಪ ಇಬ್ಬರನ್ನೂ ಬಂಧಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ದಾಳಿಯಲ್ಲಿ ಡಿವೈಎಸ್ಪಿ ಮೃತ್ಯುಂಜಯ, ಸಿಪಿಐ ಗುರುಬಸವರಾಜ ಹಾಗೂ ಪಿಎಸ್‌ಐ ಸರಳಾ ಸೇರಿದಂತೆ ಲೋಕಾಯುಕ್ತ ಅಧಿಕಾರಿಗಳು ಭಾಗವಹಿಸಿದ್ದರು.

ಭ್ರಷ್ಟರ ಬೇಟೆ

Recent Posts

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

8 hours ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

8 hours ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

8 hours ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

8 hours ago

ರೈಲಿನ ಸೂಟ್‌ಕೇಸ್‌ನಲ್ಲಿ ಮಾನವ ದೇಹದ ತುಂಡುಗಳು; ತನಿಖೆ ವೇಳೆ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ!

ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…

8 hours ago

ಚನ್ನರಾಯಪಟ್ಟಣದಲ್ಲಿ ಯುವತಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಎಂದು ಕುಟುಂಬಸ್ಥರ ಅನುಮಾನ

ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…

8 hours ago