ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ ಸಹಾಯಕ ರಾಜು ಗುರುವಾರ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ತಾಲ್ಲೂಕಿನ ಹೊಸೂರು ಹೋಬಳಿ ಹಳೆ ಉಪ್ಪಾರಹಳ್ಳಿ ಗ್ರಾಮದ ಮುದ್ದು ಗಂಗಮ್ಮ, ಕರೇಕಲ್ಲಹಳ್ಳಿ ಗ್ರಾಮದಲ್ಲಿ ನಿವೇಶನ ಹೊಂದಿದ್ದಾರೆ. ಈ ನಿವೇಶನ ಅಳತೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಸರ್ವೆ ಮಾಡಿಕೊಡಲು ಹರೀಶ್ ರೆಡ್ಡಿ ₹ 23 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ₹ 3 ಸಾವಿರ ಪಡೆದಿದ್ದರು.
ನಗರದ ಮಧುಗಿರಿ ರಸ್ತೆಯ ನಂದಿನಿ ಹಾಲಿನ ಕೇಂದ್ರದ ಬಳಿ ಗುರುವಾರ ₹ 20 ಸಾವಿರ ಲಂಚ ಪಡೆಯುವ ವೇಳೆ ಸರ್ವೆಯರ್ ಮತ್ತು ಅವರ ಸಹಾಯಕರನ್ನು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ. ‘ನಿವೇಶನದ ಮೌಲ್ಯ ₹ 65 ಸಾವಿರವಿದೆ. ಇಂತಹ ನಿವೇಶನದ ಅಳತೆಗೆ ₹ 23 ಸಾವಿರ ಲಂಚ ಕೇಳಿದ್ದಾರೆ’ ಎಂದು ಲೋಕಾಯುಕ್ತ ಡಿವೈಎಸ್‌ಪಿ ವೀರೇಂದ್ರ ಕುಮಾರ್ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಗುರು, ಸತೀಶ್, ಲಿಂಗರಾಜು, ನಾಗರಾಜು, ಚೌಡ ರೆಡ್ಡಿ ಪಾಲ್ಗೊಂಡಿದ್ದರು.
ವರದಿ: ಅವಿನಾಶ್
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…