ನವೆಂಬರ್ 12 ರಂದು ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂತೋಷ್ ಮುರಗೋಡ್ ಕೊಲೆಯಾಗಿತ್ತು. ಜಂಗ್ಲಿ ಪೇಟೆ ಸಂತೋಷ್ ಕೊಲೆ ಪ್ರಕರಣ ಖಂಡಿಸಿ ಸ್ಥಳೀಯ ನಿವಾಸಿಗಳು, ಕುಟುಂಬದ ಸದಸ್ಯರು ಪೊಲೀಸ್ ಠಾಣೆ ಎದುರು ಶವ ಇಟ್ಟು ಪ್ರತಿಭಟನೆ ಮಾಡಿದ್ದರು. ಆರೋಪಿಗೆ ಪೊಲೀಸರ ರಕ್ಷಣೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಶಾಸಕ ಪ್ರಸಾದ್ ಅಬ್ಬಯ ಸ್ವತಃ ಪ್ರತಿಭಟನೆಯಲ್ಲಿ ಭಾಗಿಯಾಗಿ ಆಕ್ರೋಶ ವ್ಯಕ್ತಪಡಿಸಿದ್ದರು.
ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿದ್ದ ರೌಡಿ ಶೀಟರ್ ಶಿವಾನಂದ್ ಗೆ ಕಸಬಾ ಪೇಟೆ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಅದಕ್ಕೆ ಮುಖ್ಯ ಕಾರಣ ರೌಡಿ ಶೀಟರ್ ಶಿವಾನಂದ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡ್ತಿದ್ದ. ಅದೇ ಕುಮ್ಮಕ್ಕಿನಿಂದ ಆತ ಜನರ ಮೇಲೆ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ. ಪೆಟ್ರೋಲ್ ಕದಿಯುವುದು ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ. ಅವನನ್ನು ಹದ್ದುಬಸ್ತಿನಲ್ಲಿಡುವಂತೆ ಸ್ಥಳೀಯರು ಒತ್ತಾಯಿಸಿದ್ದರೂ ಕಸಬಾಪೇಟೆ ಪೊಲೀಸರು ತಲೆಕೆಡೆಸಿಕೊಂಡಿರಲಿಲ್ಲ.
ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದ ಮೇಲೆ ಪಿಐ ಅಡಿವೆಪ್ಪ ಬನ್ನಿ ವರ್ಗಾವಣೆ ಮಾಡಲಾಗಿತ್ತು. ವರ್ಗಾವಣೆ ಬೆನ್ನಹಿಂದೆಯೇ ಕಸಬಾಪೇಟೆ ಪೊಲೀಸ್ ಇನ್ಸ್ಪೆಕ್ಟರ್ ಅಡಿವೆಪ್ಪ ಬನ್ನಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಲಾಭೂರಾಮ್ ಆದೇಶ ಹೊರಡಿಸಿದ್ದರು. ವರ್ಗಾವಣೆಯ ಬೆನ್ನ ಹಿಂದೆಯೇ ಅಮಾನತು ಆದೇಶ ಹೊರಡಿಸಿದ್ದರಿಂದ ಅಡಿವೆಪ್ಪ ಆಘಾತಕ್ಕೆ ತುತ್ತಾಗಿದ್ದ ಎನ್ನಲಾಗಿದೆ. ಹೈ ಬಿಪಿಯಾಗಿ ಆತ ಅಸ್ವಸ್ಥಗೊಂಡಿದ್ದ. ತಕ್ಷಣ ಆತನನ್ನು ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಇಲಾಖೆಯಿಂದಲೇ ಆತನಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…