ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಬಂಧಗಳ ನಡುವಿನ ಗಲಾಟೆ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ. ತನ್ನ ತಂಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಭಾವನೇ ತನ್ನ ಬಾಮೈದನನ್ನು ಹತ್ಯೆ ಮಾಡಿ, ಶವವನ್ನು ಕಾರಿನ ಡಿಕ್ಕಿಯಲ್ಲಿಟ್ಟು ಠಾಣೆಗೆ ಬಂದು ಶರಣಾಗಿರುವ ಘಟನೆ ನಡೆದಿದೆ.
ಬೈರಪ್ಪನಹಳ್ಳಿ ನಿವಾಸಿ ಶ್ರೀನಿವಾಸ್ ಆರೋಪಿಯಾಗಿದ್ದು, ಮರಸೂರು ಮೂಲದ ರಂಜಿತ್ (24) ಕೊಲೆಯಾದ ಯುವಕ. ವಿಶೇಷವೆಂದರೆ, ಶ್ರೀನಿವಾಸ್ ಅವರು ರಂಜಿತ್‌ನ ಅಕ್ಕ ಪವಿತ್ರಾಳನ್ನು ವಿವಾಹವಾಗಿದ್ದು, ಈ ಮೂಲಕ ಇಬ್ಬರೂ ಬಾಮೈದರಾಗಿದ್ದರು.
ರಂಜಿತ್, ಶ್ರೀನಿವಾಸ್ ಅವರ ತಂಗಿ ಕೋಮಳಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎನ್ನಲಾಗಿದೆ. ಈಗಾಗಲೇ ಮದುವೆಯಾಗಿದ್ದ ಕೋಮಳಳು ತನ್ನ ಗಂಡನನ್ನು ಬಿಟ್ಟು ರಂಜಿತ್ ಜೊತೆ ಪರಾರಿಯಾಗಿದ್ದ ಘಟನೆ ಎರಡು ಕುಟುಂಬಗಳ ನಡುವೆ ತೀವ್ರ ವೈಮನಸ್ಯಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ಶ್ರೀನಿವಾಸ್ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಪ್ರಯೋಜನವಾಗಿರಲಿಲ್ಲ.
ಇದರಿಂದ ಆಕ್ರೋಶಗೊಂಡ ಶ್ರೀನಿವಾಸ್, ರಂಜಿತ್‌ನನ್ನು ಮಾತನಾಡುವ ನೆಪದಲ್ಲಿ ಕಾರಿನಲ್ಲಿ ಕರೆದುಕೊಂಡು ಹೋಗಿ, ಬಿಲ್ವಾರದಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಇಟ್ಟುಕೊಂಡೇ ನೇರವಾಗಿ ಬನ್ನೇರುಘಟ್ಟ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿ ಶ್ರೀನಿವಾಸ್‌ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಗಾಂಜಾ ವ್ಯಸನ ಮತ್ತು ಹಣದ ವಿಚಾರಕ್ಕೆ ಸಂಬಂಧಿಸಿದ ಭೀಕರ ಕೊಲೆ ಪ್ರಕರಣವೊಂದು ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಡೆಲಿವರಿ ಬಾಯ್…
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಒಬ್ಬರು ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ…
ಪೋಷಕರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ, 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ಕನಿಷ್ಠ 6 ವರ್ಷದ ವಯೋಮಿತಿಯಲ್ಲಿ…
ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಸಿಬ್ಬಂದಿ ಕೊರತೆಯನ್ನು ನೀಗಿಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಖಾಲಿ ಇರುವ ಸುಮಾರು 4000 ಬೋಧಕ…
ಪ್ರೀತಿ ಮಾಡುವುದಾಗಿ ನಂಬಿಸಿ ಯುವತಿಯ ಖಾಸಗಿ ವಿಡಿಯೋವನ್ನು ದಾಖಲಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿದ ಆರೋಪದ ಮೇಲೆ ಸುಶಾಂತ್ ಪೂಜಾರಿ ಹಾಗೂ…
ಉತ್ತರ ಪ್ರದೇಶದ ಘಾಜಿಯಾಬಾದ್‌ನ ಟ್ರೋನಿಕಾ ಸಿಟಿಯಲ್ಲಿ ದಾರುಣ ಘಟನೆ ನಡೆದಿದ್ದು, ಪತ್ನಿ ಹಾಗೂ ಆಪ್ತ ಸ್ನೇಹಿತನ ನಡುವೆ ಅಕ್ರಮ ಸಂಬಂಧವಿದೆ…