ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ಅನುಮಾನದಿಂದ ದಾರುಣ ಘಟನೆ ಸಂಭವಿಸಿದೆ. ಪತ್ನಿಯ ಮೇಲೆ ಅನುಮಾನ ಹೊಂದಿದ್ದ ವ್ಯಕ್ತಿಯೊಬ್ಬ ಮಲಗಿದ್ದ ಪತ್ನಿಯನ್ನು ಹತ್ಯೆ ಮಾಡಿದ ಆರೋಪ ಕೇಳಿಬಂದಿದೆ.
ಶೋಭಾ ಹತ್ಯೆಯಾದ ಮಹಿಳೆಯಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂಲತಃ ಅಥಣಿ ತಾಲೂಕಿನ ಖವಟಖೊಪ್ಪ ಗ್ರಾಮದ ನಿವಾಸಿಗಳಾದ ದಂಪತಿ, ಕಟಗೇರಿ ಗ್ರಾಮದ ಅವಜೀಕರ ಮಠದಲ್ಲಿ ಕೆಲಸ ಮಾಡುತ್ತಿದ್ದರು.
ಶೋಭಾ ಮಠದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರೆ, ಪತಿ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದನು. ಪತ್ನಿಯ ಮೇಲೆ ಸದಾ ಅನುಮಾನ ಪಡುತ್ತಿದ್ದ ಆರೋಪಿ, ಇದೇ ಕಾರಣಕ್ಕೆ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಮಲಗಿದ್ದ ವೇಳೆ ಪತ್ನಿಯ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…
ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…