Categories: CrimeLatest

ಗದಗ RDPR ವಿಶ್ವವಿದ್ಯಾಲಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಸಮಗ್ರ ತನಿಖೆಗೆ ಪೋಷಕರ ಆಗ್ರಹ

ಗದಗ: ನಗರದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್‌ನಲ್ಲಿ ಮೃತಪಟ್ಟಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಮೂಲದ 25 ವರ್ಷದ ವೀಣಾ ಹಾನಾಪುರ ಅವರು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ವೀಣಾ ಅವರು ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್ (MPH) ವ್ಯಾಸಂಗ ಮಾಡುತ್ತಿದ್ದರು. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗದಗದ ಜಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ಇನ್ನೊಂದೆಡೆ, ವೀಣಾ ಅವರ ಸಾವಿನ ಕುರಿತು ಕುಟುಂಬಸ್ಥರು ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಮೃತದೇಹ ಪತ್ತೆಯಾದಾಗ ಕಾಲು ನೆಲಕ್ಕೆ ತಾಗುವ ಸ್ಥಿತಿಯಲ್ಲಿದ್ದವು. ಅಲ್ಲದೆ, ನೇಣು ಬಿಗಿಯಲು ಬಳಸಿರುವ ಬಟ್ಟೆ ತಮ್ಮ ಮಗಳಿಗೆ ಸೇರಿದ್ದಲ್ಲ ಎಂದು ಪೋಷಕರು ಆರೋಪಿಸಿದ್ದಾರೆ. ಮೃತಳ ಮುಖದ ಮೇಲೆ ಗಾಯದ ಗುರುತುಗಳಿರುವುದರಿಂದ ಇದು ಆತ್ಮಹತ್ಯೆಯಲ್ಲ, ಬೇರೆ ಏನಾದರೂ ನಡೆದಿದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಕರಣದ ಪ್ರತಿಯೊಂದು ಆಯಾಮವನ್ನೂ ಪರಿಶೀಲಿಸಿ, ಮಗಳ ಸಾವಿನ ಹಿಂದಿರುವ ನಿಜಾಂಶವನ್ನು ಬಹಿರಂಗಪಡಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿ ಹಾಗೂ ತನಿಖೆಯ ಬಳಿಕ ಸಾವಿನ ನಿಖರ ಕಾರಣ ತಿಳಿದುಬರುವ ನಿರೀಕ್ಷೆಯಿದೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

16 hours ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

16 hours ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

16 hours ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago