Categories: CrimeLatest

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ ಎಂದು ಪರಿಗಣಿಸಲಾಗಿದ್ದ ಈ ಪ್ರಕರಣದಲ್ಲಿ, ಇದೀಗ ಅತ್ಯಾಚಾರ ಯತ್ನದ ಬಳಿಕ ಕೊಲೆ ನಡೆದಿರುವ ಆರೋಪ ಕೇಳಿಬಂದಿದ್ದು, ಪ್ರಕರಣದ ತನಿಖೆ ತೀವ್ರಗೊಂಡಿದೆ. ಈ ಸಂಬಂಧ ಪೊಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮೃತ ಯುವತಿ ಮಂಡ್ಯ ನಗರದ ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಖಾಸಗಿ ಪಿಜಿಯಲ್ಲಿ ವಾಸವಾಗಿದ್ದರು. ಘಟನೆ ನಡೆದ ದಿನ ಮನೆಗೆ ತೆರಳುವುದಾಗಿ ತಿಳಿಸಿದ್ದ ಆಕೆ, ಸ್ನೇಹಿತರಾದ ಅಶ್ವಿನಿ, ವಿಷ್ಣು ಹಾಗೂ ಶಿವಕುಮಾರ್ ಅವರೊಂದಿಗೆ ಕಾರಿನಲ್ಲಿ ಕೊಮ್ಮೇರಹಳ್ಳಿ ಬೆಟ್ಟದ ಪ್ರದೇಶಕ್ಕೆ ತೆರಳಿದ್ದರು ಎನ್ನಲಾಗಿದೆ.

ಈ ವೇಳೆ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಆರಂಭದಲ್ಲಿ ಮಾಹಿತಿ ನೀಡಲಾಗಿತ್ತು. ಕಾರಿನಲ್ಲಿದ್ದ ಉಳಿದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರು.

ಆದರೆ ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿವೆ. ಘಟನೆ ನಡೆದ ಹಲವು ಗಂಟೆಗಳ ಬಳಿಕವೇ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ. ಈ ವಿಳಂಬವೇ ಪ್ರಕರಣದ ಬಗ್ಗೆ ಅನುಮಾನಗಳಿಗೆ ಕಾರಣವಾಗಿದೆ.

ಮೃತಳ ತಾಯಿ ನೀಡಿರುವ ದೂರಿನ ಪ್ರಕಾರ, ಹುಟ್ಟುಹಬ್ಬ ಆಚರಣೆಯ ನೆಪದಲ್ಲಿ ಯುವತಿಯನ್ನು ಹೊರಗೆ ಕರೆದುಕೊಂಡು ಹೋಗಿದ್ದ ಸ್ನೇಹಿತರು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಇದಕ್ಕೆ ಯುವತಿ ವಿರೋಧ ವ್ಯಕ್ತಪಡಿಸಿದಾಗ ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಕಾರು ಅಪಘಾತದಂತೆ ಬಿಂಬಿಸಲು ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಮೃತ ಯುವತಿ ಹಾಗೂ ಮತ್ತೊಬ್ಬ ಯುವತಿ ಒಂದೇ ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಜೊತೆಯಲ್ಲಿದ್ದ ಇಬ್ಬರು ಯುವಕರು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದು, ಹುಟ್ಟುಹಬ್ಬ ಆಚರಣೆಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.

ಸದ್ಯ ಪ್ರಕರಣದಲ್ಲಿ ವಶಕ್ಕೆ ಪಡೆದಿರುವ ಮೂವರು ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ, ವಿಧಿವಿಜ್ಞಾನ ಸಾಕ್ಷ್ಯಗಳು ಹಾಗೂ ತನಿಖೆಯಿಂದ ಲಭ್ಯವಾಗುವ ಇತರೆ ಮಾಹಿತಿಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

21 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

21 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago