Latest

ಮಂಡ್ಯದಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು: ಪತಿ ವಿರುದ್ಧ ಕೊಲೆ ಆರೋಪ

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರಿನ ಕೆಸ್ತೂರಿನಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದ್ದು, ಈ ಕುರಿತು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಘಟನೆ ವಿವರ:
ಮಾಚಳ್ಳಿ ಗ್ರಾಮದ ನಿವಾಸಿ ದಿವ್ಯ ಎಂ.ಜೆ. (28) ಎಂಬವರು ನಿನ್ನೆ ರಾತ್ರಿ ಜಿಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ದಿವ್ಯ 2016ರಲ್ಲಿ ಕೆಸ್ತೂರಿನ ಗಿರೀಶ್ ಅವರ ಜೊತೆ ವಿವಾಹವಾಗಿದ್ದರು. ದಂಪತಿ ಜಿಮ್‌ ವ್ಯವಹಾರ ನಡೆಸುತ್ತಿದ್ದು, ಸ್ಥಳೀಯರಿಗೆ ಫಿಟ್ನೆಸ್ ತರಬೇತಿ ನೀಡುತ್ತಿದ್ದರು.

ಅನುಮಾನಾಸ್ಪದ ಸಾವು:
ಇತ್ತೀಚೆಗೆ ಗಿರೀಶ್ ಮತ್ತೊಬ್ಬ ಮಹಿಳೆಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾರೆ ಎಂಬ ಕಾರಣಕ್ಕೆ ದಿವ್ಯ ಮತ್ತು ಗಿರೀಶ್ ನಡುವೆ ಮನಸ್ತಾಪ ಉಂಟಾಗಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈ ಸಂಬಂಧ ಮೂರು ತಿಂಗಳ ಹಿಂದೆ ಗ್ರಾಮ ಪಂಚಾಯ್ತಿ ಮದ್ಯಸ್ಥತೆ ನಡೆಸಿದ್ದರೂ, ಬಳಿಕ ದಂಪತಿ ಸಾಮಾನ್ಯ ಜೀವನ ನಡೆಸುತ್ತಿದ್ದರು. ಆದರೆ ದಿವ್ಯ ನಿಗೂಢ ರೀತಿಯಲ್ಲಿ ಸಾವನ್ನಪ್ಪಿರುವುದರಿಂದ ಕುಟುಂಬಸ್ಥರು ಗಿರೀಶ್ ವಿರುದ್ಧ ಶಂಕೆ ವ್ಯಕ್ತಪಡಿಸಿದ್ದಾರೆ.

ಕುಟುಂಬದ ಆರೋಪ:
ದಿವ್ಯ ಅವರ ಕುಟುಂಬದ ಸದಸ್ಯರು, “ಇದು ಆತ್ಮಹತ್ಯೆ ಅಲ್ಲ, ಗಿರೀಶ್ ಅವರೇ ದಿವ್ಯ ಅವರನ್ನು ಕೊಂದು, ಇದನ್ನು ಆತ್ಮಹತ್ಯೆಯಂತೆ ತೋರುವ ಪ್ರಯತ್ನ ಮಾಡಿದ್ದಾರೆ” ಎಂದು ಆರೋಪಿಸುತ್ತಿದ್ದಾರೆ. ಈ ಕುರಿತು ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಪೊಲೀಸರು ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚಲು ದಿವ್ಯ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ಮುಂದುವರಿದಿದೆ.

nazeer ahamad

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

7 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

22 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago