ಹಾಸನ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ–ಕೂಡಿಗೆ ಸರ್ಕಲ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ವ್ಯಕ್ತಿಯನ್ನು ಹಾಸನದ ಪೆನ್‌ಷನ್ ಮೊಹಲ್ಲಾ ನಿವಾಸಿ ಜಮ್ಮಿದ್ (58) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ನದೀಮ್ ಅವರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಮ್ಮಿದ್ ಹಾಗೂ ನದೀಮ್ ಇಬ್ಬರೂ ವೈಯಕ್ತಿಕ ಕೆಲಸದ ನಿಮಿತ್ತ ಹಾಸನದಿಂದ ಸಕಲೇಶಪುರದತ್ತ ಬೈಕ್‌ನಲ್ಲಿ ತೆರಳುತ್ತಿದ್ದರು. ಇದೇ ವೇಳೆ ಸಕಲೇಶಪುರ ತಹಶೀಲ್ದಾರ್ ಸುಪ್ರಿತಾ ಅವರು ಪ್ರಯಾಣಿಸುತ್ತಿದ್ದ ಸರ್ಕಾರಿ ಜೀಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ.
ಡಿಕ್ಕಿಯ ತೀವ್ರತೆಗೆ ಜಮ್ಮಿದ್ ಅವರಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ನದೀಮ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು.
ಅಪಘಾತ ಸಂಭವಿಸಿದ ತಕ್ಷಣ ತಹಶೀಲ್ದಾರ್ ಸುಪ್ರಿತಾ ಮಾನವೀಯತೆ ಮೆರೆದಿದ್ದು, ಗಾಯಾಳುವಿಗೆ ತಕ್ಷಣ ಚಿಕಿತ್ಸೆ ದೊರಕುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರಸ್ತುತ ನದೀಮ್ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಆಲೂರು ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…
ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…