ಲಂಚ ಪಡೆಯುತ್ತಿದ್ದ ಸಮಯದಲ್ಲಿ ತಗಲಾಕೊಂಡ ಚೆನ್ನಮ್ಮನ ಕಿತ್ತೂರು ತಹಸಿಲ್ದಾರ್.
ಮನೆ ಹಾಗೂ ಕಚೇರಿಯನ್ನು ಲೋಕಾಯುಕ್ತ ಪೋಲಿಸರು ಶುಕ್ರವಾರ. ತಡರಾತ್ರಿ ಜಾಲಾಡಿದ್ಧು, ಹಲವು ದಾಖಲೆಗಳು ಹಾಗೂ 10 ಲಕ್ಷಕ್ಕೂ ಅಧಿಕ ನಗದು ಪತ್ತೆಯಾಗಿದೆ ಎನ್ನಲಾಗಿದೆ.
ಶುಕ್ರವಾರ 2 ,ಲಕ್ಷ ಲಂಚ ತೆಗೆದುಕೋಳ್ಳುತ್ತಿದ್ದ ವೇಳೆ ಈ ಭ್ರಷ್ಟ ತಹಸಿಲ್ದಾರ್ ಸೋಮಲಿಂಗಪ್ಪ ಹಲಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕುಬಿದ್ದಿದ್ದಾನೆ. ಹಾಗೂ ಗುಮಾಸ್ತ ಜಿ.ಪ್ರಸನ್ನ ಇವರಿಬ್ಬರ ವಿರುದ್ಧ ಲೋಕಾಯುಕ್ತ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶುಕ್ರವಾರ ಬೆಳಗ್ಗೆ ಇಬ್ಬರನ್ನು ಬೇಳಗಾವಿಗೆ ಕರೆತಂದು ಇಲ್ಲಿನ ಜೀಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿ ನಂತರ ಲೋಕಾಯುಕ್ತ ನ್ಯಾಯಾಧೀಶರ ಮನೆಗೆ ಆರೋಪಿತರನ್ನು ಕರೆದೊಯ್ದು ಅಲ್ಲಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಕರೆತಂದರು.
ಅರ್ಜಿದಾರನ ತಂದೆಗೆ ಹೃದಯಾಘಾತ: ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರ ತಾಲೂಕಿನ ಖೋದಾನಪುರ ಗ್ರಾಮದ ರೈತ ರಾಜೇಂದ್ರ ಇನಾಮದಾರ ಇವರು ತಾಲೂಕಾ ದಂಡಾಧಿಕಾರಿ ಹಾಗೂ ಗುಮಾಸ್ತ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಿದ್ದ ಹೀನ್ನಲೆಯಲ್ಲಿ ಅವರ ತಂದೆ ಭಾಪುಸಾಹೇಬ್ ಅವರು ಶುಕ್ರವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು.
ತಹಸಿಲ್ದಾರ್ ಸೋಮಲಿಂಗಪ್ಪ ಹಲಗಿ ಹಾಗೂ ಗುಮಾಸ್ತ ಜಿ.ಪ್ರಸನ್ನ ಲೋಕಾಯುಕ್ತರ ಬಲೆಗೆ ಬಿದ್ದ ವಿಷಯ ಗ್ರಾಮದಲ್ಲಿ ಕಾಡ್ಗಿಚ್ಚಿನಂತೆ ಹರಡಿತು.ತಮ್ಮ ಜಮೀನಿನ ವಿಚಾರ ಇಷ್ಟು ದೋಡ್ಡ ಪ್ರಕರಣವಾಯಿತು ಎಂದು ಆಘಾತಗೊಂಡ ಬಾಪು ಸಾಹೇಬ್ ಅವರಿಗೆ ಶುಕ್ರವಾರ ತಡರಾತ್ರಿ 1:30. ರ ಸುಮಾರಿಗೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಹೇಳಿದರು.
ವರದಿ: ಚರಂತಯ್ಯಾ ಹಿರೇಮಠ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…