ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಇಟಗಿ ಕ್ರಾಸ್, ಎನ್‌ಎಚ್-4 ರಲ್ಲಿ ಸೋಮವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಅತೀ ವೇಗದಲ್ಲಿ ಬಂದ ಆಯಿಲ್ ಟ್ಯಾಂಕರ್ ನಿಯಂತ್ರಣ ತಪ್ಪಿ ರಸ್ತೆಯ ಅಂಚಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ನುಗ್ಗಿದ ಪರಿಣಾಮ, ರಾಮಚಂದ್ರ ಜಾಧವ್ (45), ಮಹೇಶ್ ಜಾಧವ್ (18), ಹಾಗೂ ರಾಮಣ್ಣ ಅಲಿಯಾಸ್ ರಮೇಶ್ (38) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ತೀವ್ರತೆಗೆ ಶಾಕ್‌ಗೆ ಒಳಗಾದ ಸ್ಥಳೀಯರು ಕೂಡಲೇ ಸಹಾಯಕ್ಕೆ ಧಾವಿಸಿದರು. ಗಾಯಾಳುಗಳನ್ನು ಹೆದ್ದಾರಿ ಪೆಟ್ರೋಲ್ ಸಿಬ್ಬಂದಿಯ ನೆರವಿನಿಂದ ತಕ್ಷಣವೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಘಟನೆಯ ಮಾಹಿತಿ ದೊರೆತ ಬೆನ್ನಲ್ಲೇ ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ. ಬಸರಗಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.
ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ಅಗ್ನಿಶಾಮಕ ದಳ ಸ್ಥಳಕ್ಕೆ ಬಂದಿದ್ದು, ಕ್ರೇನ್ ಸಹಾಯದಿಂದ ಟ್ಯಾಂಕರ್ ತೆರವುಗೊಳಿಸಲಾಯಿತು. ಈ ಸಂದರ್ಭ ರಸ್ತೆ ಮೇಲೆ ಕೆಲ ಕಾಲ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.
ಸ್ಥಳೀಯರು ವಾಹನಚಾಲಕರ ಅಜಾಗರೂಕತೆಯನ್ನು ಘಟನೆಗೆ ಕಾರಣವೆಂದು ಆರೋಪಿಸುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…