Latest

ಟ್ಯಾಂಕರ್ ಹರಿದು: ಸ್ಥಳದಲ್ಲೇ ಮೂವರು ಕಾರ್ಮಿಕರ ದುರ್ಮರಣ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಇಟಗಿ ಕ್ರಾಸ್, ಎನ್‌ಎಚ್-4 ರಲ್ಲಿ ಸೋಮವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಅತೀ ವೇಗದಲ್ಲಿ ಬಂದ ಆಯಿಲ್ ಟ್ಯಾಂಕರ್ ನಿಯಂತ್ರಣ ತಪ್ಪಿ ರಸ್ತೆಯ ಅಂಚಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ನುಗ್ಗಿದ ಪರಿಣಾಮ, ರಾಮಚಂದ್ರ ಜಾಧವ್ (45), ಮಹೇಶ್ ಜಾಧವ್ (18), ಹಾಗೂ ರಾಮಣ್ಣ ಅಲಿಯಾಸ್ ರಮೇಶ್ (38) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ತೀವ್ರತೆಗೆ ಶಾಕ್‌ಗೆ ಒಳಗಾದ ಸ್ಥಳೀಯರು ಕೂಡಲೇ ಸಹಾಯಕ್ಕೆ ಧಾವಿಸಿದರು. ಗಾಯಾಳುಗಳನ್ನು ಹೆದ್ದಾರಿ ಪೆಟ್ರೋಲ್ ಸಿಬ್ಬಂದಿಯ ನೆರವಿನಿಂದ ತಕ್ಷಣವೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಘಟನೆಯ ಮಾಹಿತಿ ದೊರೆತ ಬೆನ್ನಲ್ಲೇ ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ. ಬಸರಗಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.

ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ಅಗ್ನಿಶಾಮಕ ದಳ ಸ್ಥಳಕ್ಕೆ ಬಂದಿದ್ದು, ಕ್ರೇನ್ ಸಹಾಯದಿಂದ ಟ್ಯಾಂಕರ್ ತೆರವುಗೊಳಿಸಲಾಯಿತು. ಈ ಸಂದರ್ಭ ರಸ್ತೆ ಮೇಲೆ ಕೆಲ ಕಾಲ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.

ಸ್ಥಳೀಯರು ವಾಹನಚಾಲಕರ ಅಜಾಗರೂಕತೆಯನ್ನು ಘಟನೆಗೆ ಕಾರಣವೆಂದು ಆರೋಪಿಸುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

12 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

24 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

1 day ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago