ಗುಜರಾತ್‌ನ ಸೂರತ್ ನಗರದ ಅಚ್ಚರಿ ಮೂಡಿಸಿದ ಘಟನೆ ಇದೀಗ ಬೆಳಕಿಗೆ ಬಂದಿದೆ. ಟ್ಯೂಷನ್‌ಗೆ ಬರುತ್ತಿದ್ದ 13 ವರ್ಷದ ಬಾಲಕನೊಂದಿಗೆ ಅವೈಧ ಸಂಬಂಧ ಹೊಂದಿ ಗರ್ಭಿಣಿಯಾಗಿದ್ದ 23 ವರ್ಷದ ಯುವ ಶಿಕ್ಷಕಿ ಇದೀಗ ಗರ್ಭಪಾತಕ್ಕೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾಳೆ. ಈ ಘಟನೆ ಶಿಕ್ಷಣ ಕ್ಷೇತ್ರದಲ್ಲಿ ನಾಚಿಕೆಗೇಡು ತರಿಸಿದ್ದು, ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಈಕೆ ತನ್ನ ಶಿಷ್ಯನನ್ನು ಬಲವಂತವಾಗಿ ಪ್ರೀತಿಯ ಬಲೆಗೆ ಸೆರೆಹಾಕಿ, ನಂತರ ಆತನನ್ನು ಒಪ್ಪಿಗೆಯಿಲ್ಲದೆ ತನ್ನೊಂದಿಗೆ ತೆಗೆದುಕೊಂಡು ಹೋಗಿದ್ದಾಳೆ. ಕಳೆದ ಏಪ್ರಿಲ್ 29ರಂದು ಸುದೀರ್ಘ ಹುಡುಕಾಟದ ಬಳಿಕ ಪೊಲೀಸರು ಇಬ್ಬರನ್ನೂ ಪತ್ತೆ ಹಚ್ಚಿ ಶಿಕ್ಷಕಿಯನ್ನು ಬಂಧಿಸಿದರು. ಈ ಸಂಬಂಧ ಬಾಲಕನ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಸದ್ಯ ಶಿಕ್ಷಕಿ ಸೂರತ್ ಜೈಲಿನಲ್ಲಿ ಬಂಧಿಯಾಗಿದ್ದು, ತನಗೆ ಗರ್ಭವಿದ್ದು, ಅದಕ್ಕೆ ಕಾರಣ 13 ವರ್ಷದ ವಿದ್ಯಾರ್ಥಿಯೇ ಎಂಬ ಹೇಳಿಕೆ ನೀಡಿದ್ದಾಳೆ. ಪ್ರಕರಣದ ತೀವ್ರತೆಯನ್ನು ಗಮನಿಸಿದ ಪೊಲೀಸರು ಡಿಎನ್‌ಎ ಪರೀಕ್ಷೆ ನಡೆಸಲು ಸಿದ್ಧತೆ ಕೈಗೊಂಡಿದ್ದಾರೆ.
ಇದೀಗ ಶಿಕ್ಷಕಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ, ತನ್ನ ಹಾಗೂ ಗರ್ಭದಲ್ಲಿರುವ ಭ್ರೂಣದ ಜೀವಕ್ಕೆ ಅಪಾಯವಿದೆ. ಹೆರಿಗೆಯ ವೇಳೆ ಜೀವಕ್ಕೆ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚು ಎಂಬುದನ್ನು ಮನವರಿಕೆ ಮಾಡಿದ್ದಾಳೆ. ಹೀಗಾಗಿ ಗರ್ಭಪಾತಕ್ಕೆ ಕಾನೂನು ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾಳೆ.
ಈ ಸಂಬಂಧ ನ್ಯಾಯಾಲಯ, ಪ್ರಕರಣದ ವರದಿಯನ್ನು ಪಡೆಯಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದು, ಮುಂದಿನ ನಿರ್ಧಾರಕ್ಕಾಗಿ ವಿಚಾರಣೆ ಮುಂದೂಡಲಾಗಿದೆ.
ಈ ಘಟನೆ ಸಾಮಾಜಿಕವಾಗಿ ಹಾಗೂ ಕಾನೂನು ಹಿನ್ನಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಬಾಲಕನ ಹಕ್ಕುಗಳ ರಕ್ಷಣೆಯ ವಿಚಾರವೂ ಪ್ರಮುಖ ಅಂಶವಾಗಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…