ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಯೊಂದರ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ ಹಾಗೂ ಮಹಿಳಾ ಸಹೋದ್ಯೋಗಿ ಶಿಕ್ಷಕಿ ಆಪ್ತವಾಗಿ ವರ್ತಿಸುತ್ತಿರುವ ದೃಶ್ಯಗಳು ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ಶಿಕ್ಷಕನ ಅಕ್ರಮ ಸಂಬಂಧದ ಬಗ್ಗೆ ಅನುಮಾನಗೊಂಡಿದ್ದ ಪತ್ನಿ, ಸತ್ಯಾಸತ್ಯತೆ ತಿಳಿದುಕೊಳ್ಳುವ ಉದ್ದೇಶದಿಂದ ಶಾಲೆಯ ತರಗತಿ ಕೋಣೆಯಲ್ಲಿ ಗುಪ್ತ ಕ್ಯಾಮೆರಾವನ್ನು ಅಳವಡಿಸಿದ್ದರೆಂದು ವರದಿಯಾಗಿದೆ. ಬಳಿಕ ಕ್ಯಾಮೆರಾದಲ್ಲಿ ದಾಖಲಾಗಿದ್ದ ದೃಶ್ಯಗಳನ್ನು ಪರಿಶೀಲಿಸಿದಾಗ, ಶಾಲೆಯ ಸಮಯದಲ್ಲೇ ಶಿಕ್ಷಕ ಹಾಗೂ ಮಹಿಳಾ ಸಹೋದ್ಯೋಗಿ ಕ್ಲಾಸ್‌ರೂಮ್‌ನಲ್ಲಿ ಆಪ್ತವಾಗಿ ವರ್ತಿಸುತ್ತಿರುವ ದೃಶ್ಯಗಳು ಸೆರೆಯಾಗಿವೆ ಎನ್ನಲಾಗಿದೆ.
ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಸ್ಥಳೀಯರು ಹಾಗೂ ಪೋಷಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಕ್ಕಳಿಗೆ ಶಿಕ್ಷಣ ನೀಡಬೇಕಾದ ಶಾಲಾ ಆವರಣದಲ್ಲಿ ಇಂತಹ ಘಟನೆ ನಡೆದಿದೆ ಎಂಬ ಆರೋಪ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿರುವ ಶಿಕ್ಷಕ, “ಪರಿಸ್ಥಿತಿಯ ಆವೇಶದಲ್ಲಿ ಮೈಮರೆತುಹೋಗಿದ್ದೆ” ಎಂದು ಹೇಳಿರುವುದಾಗಿ ವರದಿಯಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯು ಸೂಕ್ತ ತನಿಖೆ ನಡೆಸಿ, ವಾಸ್ತವಾಂಶಗಳ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಸದ್ಯ ಪ್ರಕರಣ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಅಧಿಕಾರಿಗಳ ಅಧಿಕೃತ ತನಿಖೆಯತ್ತ ಎಲ್ಲರ ಗಮನ ನೆಟ್ಟಿದೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…