Latest

ಶಾಲೆಗೆ ಮದ್ಯ ಸೇವಿಸಿ ಬಂದ ಶಿಕ್ಷಕಿ ಅಮಾನತು.

ಧಾರ್‌ (ಜೂನ್ 25): ಮದ್ಯ ಸೇವಿಸಿ ಶಾಲೆಗೆ ಹಾಜರಾದ ಶಿಕ್ಷಕಿ ಶಾಲಾ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣ ಧಾರ್‌ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಜೂನ್ 23 ರಂದು ಧಾರ್‌ನ ಮನವಾರ್‌ ವಿಭಾಗದ ಸಿಂಘಾನಾ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮದ್ಯಪಾನದ ಸ್ಥಿತಿಯಲ್ಲಿ ಶಾಲೆಗೆ ಬಂದ ಶಿಕ್ಷಕಿ ಸಹೋದ್ಯೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಈ ಸಂಬಂಧದ ದೃಶ್ಯಗಳು ವೈರಲ್ ಆಗಿವೆ.

ವಿಡಿಯೋ ಪ್ರಾಥಮಿಕ ಶಿಕ್ಷಣ ಇಲಾಖೆಯು ತಕ್ಷಣ ಕ್ರಮ ಕೈಗೊಂಡಿದ್ದು, ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.

ಬುಡಕಟ್ಟು ಶಿಕ್ಷಣ ಇಲಾಖೆಯ ಸಹಾಯಕ ಆಯುಕ್ತ ನರೋತ್ತಮ್‌ ವರ್ಕಾಡೆ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಶಿಕ್ಷಕಿಯ ವರ್ತನೆಗೆ ಸಂಬಂಧಿಸಿದಂತೆ ಇಲಾಖೆ ಮಟ್ಟದಲ್ಲಿ ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಧಿಕಾರಿಗಳ ಸೂಚನೆಯಂತೆ ಮನವಾರ್‌ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಕಿಶೋರ್‌ ಕುಮಾರ್‌ ಅವರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದ್ದು, ಮುಂದಿನ ಕ್ರಮ ಶೀಘ್ರದಲ್ಲೇ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.

nazeer ahamad

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

3 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

7 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

10 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

15 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago