Categories: CrimeLatest

ಶಿಕ್ಷಕಿಯ ಭೀಕರ ಹತ್ಯೆ: ಕೊಲೆ ಬಳಿಕ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರನ್ನು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಬೆಚ್ಚಿಬೀಳಿಸಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ದುಷ್ಕರ್ಮಿಗಳು, ಬಳಿಕ ಶವವನ್ನು ರಸ್ತೆ ಬದಿಯಲ್ಲೇ ಸುಟ್ಟು ಹಾಕಿರುವ ಭಯಾನಕ ಘಟನೆ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಶಿಕ್ಷಕಿಯನ್ನು 57 ವರ್ಷದ ಜ್ಯೋತಿ ಕಪಾಳೆ ಎಂದು ಗುರುತಿಸಲಾಗಿದೆ. ಅವರು ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಂಜರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕೆಲಸದ ನಿಮಿತ್ತ ಅವರು ಬೀದರ್‌ನಲ್ಲಿ ವಾಸವಾಗಿದ್ದು, ವಾರಕ್ಕೊಮ್ಮೆ ಕಲಬುರಗಿಯ ಮನೆಗೆ ಬಂದು ಹೋಗುತ್ತಿದ್ದರು.

ಇದೀಗ ಕಲಬುರಗಿಯಿಂದ ಬೀದರ್‌ಗೆ ತೆರಳುವ ವೇಳೆ, ಮಾರ್ಗ ಮಧ್ಯದಲ್ಲಿರುವ ಕಲ್ಮೂಡ ಗ್ರಾಮದ ರಸ್ತೆ ಬದಿಯಲ್ಲಿ ಜ್ಯೋತಿ ಕಪಾಳೆ ಅವರ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದುಷ್ಕರ್ಮಿಗಳು ಮೊದಲು ಅವರನ್ನು ಕೊಲೆ ಮಾಡಿ, ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಶವವನ್ನು ಸುಟ್ಟು ಹಾಕಿರುವುದಾಗಿ ಶಂಕಿಸಲಾಗಿದೆ.

ಈ ಘಟನೆ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಯ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

4 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

19 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

23 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago