Categories: CrimeLatest

ಪತ್ನಿಗೆ ನಿದ್ದೆ ಮಾತ್ರೆ ಕೊಟ್ಟು ಪರಸ್ತ್ರೀಯೊಂದಿಗೆ ಸರಸ: ಶಿಕ್ಷಕನ ಕಾಮ ಪುರಾಣ ಬಯಲು

ಹುಬ್ಬಳ್ಳಿಯಲ್ಲಿ ಶಿಕ್ಷಕನೊಬ್ಬನ ವಿರುದ್ಧ ಪತ್ನಿಗೆ ಕಿರುಕುಳ ನೀಡಿದ್ದು ಹಾಗೂ ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿಜಯಪುರ ಮೂಲದ ಮಾಲಿಂಗಪ್ಪ ಎಂಬಾತ ಈ ಆರೋಪಕ್ಕೆ ಒಳಗಾಗಿದ್ದು, ಈ ಕುರಿತು ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಾಹಿತಿಯ ಪ್ರಕಾರ, ಮಾಲಿಂಗಪ್ಪ ಹುಬ್ಬಳ್ಳಿಯ ಎಲ್ಟಿ ತಾಂಡ ಪ್ರದೇಶದ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದು, ತನ್ನ ಎದುರಿನ ಮನೆಯಲ್ಲಿದ್ದ ಮಹಿಳೆಯೊಂದಿಗೆ ಆಪ್ತ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ. ಈ ಸಂಬಂಧದ ಬಗ್ಗೆ ತಿಳಿದ ಪತ್ನಿ ಕಾಂಚನ, ಗಂಡನ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾಳೆ.

ಕಾಂಚನ ಆರೋಪದಂತೆ, ಮಾಲಿಂಗಪ್ಪ ತನ್ನೊಂದಿಗೆ ವಿವಾಹವಾಗಿದ್ದರೂ ಪರಸ್ತ್ರೀಯೊಂದಿಗೆ ಸಂಬಂಧ ಮುಂದುವರಿಸಿಕೊಂಡು, ತನ್ನ ಮೇಲೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದಾನೆ. ಅಲ್ಲದೆ, ಮತ್ತೊಬ್ಬ ಮಹಿಳೆಯನ್ನು ಮನೆಗೆ ಕರೆತರಲು ತನ್ನ ಪತ್ನಿಗೆ ಬಲವಂತವಾಗಿ ನಿದ್ದೆ ಮಾತ್ರೆ ನೀಡುತ್ತಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ಇಬ್ಬರಿಗೂ 2016ರಲ್ಲಿ ವಿವಾಹವಾಗಿದ್ದು, ದಂಪತಿಗೆ ಮೂರು ವರ್ಷದ ಮಗು ಇದೆ. ಈ ನಡುವೆಯೂ ಮಾಲಿಂಗಪ್ಪ ತನ್ನ ವರ್ತನೆ ಬದಲಿಸದೆ ಪತ್ನಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಲಾಗಿದೆ. ಗಂಡನ ಮೊಬೈಲ್‌ನಲ್ಲಿ ನಡೆದ ಸಂದೇಶ ವಿನಿಮಯವನ್ನು ಕಂಡು ಪತ್ನಿ ಮತ್ತಷ್ಟು ಬೆಚ್ಚಿಬಿದ್ದಿದ್ದಾಳೆ.

ಈ ವಿಷಯವನ್ನು ಪ್ರಶ್ನಿಸಿದಾಗ ಮಾಲಿಂಗಪ್ಪ ತನ್ನ ಪತ್ನಿಗೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಘಟನೆಗಳಿಂದ ಮನನೊಂದು ಕಾಂಚನ ಆತ್ಮಹತ್ಯೆಗೂ ಯತ್ನಿಸಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.

ನಂತರ ಮಾಲಿಂಗಪ್ಪ ತನ್ನ ಪತ್ನಿಯನ್ನು ತವರು ಮನೆಗೆ ಕಳುಹಿಸಿದ್ದಾನೆ ಎಂದು ಹೇಳಲಾಗಿದ್ದು, ಇದೀಗ ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಪೊಲೀಸರು ಕೌನ್ಸಿಲಿಂಗ್ ನೆಪದಲ್ಲಿ ಕ್ರಮ ಕೈಗೊಳ್ಳದೇ ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪವನ್ನೂ ಕಾಂಚನ ಮಾಡಿದ್ದಾರೆ.

ಈ ಪ್ರಕರಣ ಇದೀಗ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದ್ದು, ಮಹಿಳಾ ಸಂಘಟನೆಗಳು ಸಂತ್ರಸ್ತೆಗೆ ಬೆಂಬಲ ಸೂಚಿಸಿ, ಸೂಕ್ತ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿವೆ.

ಭ್ರಷ್ಟರ ಬೇಟೆ

Recent Posts

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

3 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

6 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

11 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago