ಚಿತ್ರದುರ್ಗ ಜಿಲ್ಲೆಯಲ್ಲಿ ಮತ್ತೊಂದು ಮನಕಲುಕುವ ಪೋಕ್ಸೋ ಪ್ರಕರಣ ಬೆಳಕಿಗೆ ಬಂದಿದೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಕರಿಂದಲೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಪೋಷಕರಲ್ಲಿ ಆತಂಕ ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲೇ ಚಳ್ಳಕೆರೆ ತಾಲೂಕಿನ ಘಟನೆ ಸಮಾಜವನ್ನು ಬೆಚ್ಚಿಬೀಳಿಸಿದೆ.
ವಿದ್ಯೆ ಕಲಿಸಬೇಕಾದ ಗುರುವೇ ಕಾಮಪಿಶಾಚಿಯಾಗಿ ವರ್ತಿಸಿರುವ ಘಟನೆ ಚಳ್ಳಕೆರೆಯೊಂದರಲ್ಲಿ ನಡೆದಿದೆ. 16 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಗೆ ಪುಸಲಾಯಿಸಿ, ಅದೇ ಶಾಲೆಯ ಗಣಿತ ಶಿಕ್ಷಕನೊಬ್ಬ ಅವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಈ ದುಷ್ಕೃತ್ಯದ ಪರಿಣಾಮವಾಗಿ ವಿದ್ಯಾರ್ಥಿನಿ ಗರ್ಭವತಿಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಆರೋಪಿಯಾಗಿರುವ ಶಿಕ್ಷಕ ಹೆಚ್.ಓ. ರಾಜಣ್ಣ, ಶಾಲಾ ಆವರಣದಲ್ಲಿಯೇ ವಿದ್ಯಾರ್ಥಿನಿಯ ಮೇಲೆ ನಿರಂತರವಾಗಿ ದೌರ್ಜನ್ಯ ಎಸಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಪೋಷಕರಿಗೆ ವಿಷಯ ತಿಳಿದರೆ ಸಮಸ್ಯೆಯಾಗಬಹುದು ಎಂಬ ಭಯದಿಂದ, ವಿದ್ಯಾರ್ಥಿನಿಗೆ ಅಕ್ರಮವಾಗಿ ಗರ್ಭಪಾತ ಮಾಡಿಸಿರುವುದಾಗಿ ಆರೋಪಿಸಲಾಗಿದೆ.
ಇದೇ ವೇಳೆ, ಈ ಪ್ರಕರಣವನ್ನು ಮುಚ್ಚಿಹಾಕಲು ಶಿಕ್ಷಕ ಪೂರ್ವಯೋಜನೆ ರೂಪಿಸಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ. ಚಳ್ಳಕೆರೆಯ ಲಕ್ಷ್ಮೀ ಶ್ರೀನಿವಾಸ ನರ್ಸಿಂಗ್ ಹೋಮ್‌ನ ವೈದ್ಯೆ ಶಂಕರಲಕ್ಷ್ಮೀ ಅವರ ಸಹಕಾರದಿಂದ ಗರ್ಭಪಾತ ನಡೆಸಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.
ಘಟನೆ ಕುರಿತು ಮಕ್ಕಳ ರಕ್ಷಣಾಧಿಕಾರಿ ರೇಖಾ ನೀಡಿದ ದೂರಿನ ಆಧಾರದ ಮೇಲೆ ಚಳ್ಳಕೆರೆ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿ ಶಿಕ್ಷಕ ಹಾಗೂ ಸಂಬಂಧಿತ ವೈದ್ಯೆಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಈ ಘಟನೆ ಪೋಷಕರಲ್ಲಿ ಭಾರೀ ಆತಂಕ ಹುಟ್ಟಿಸಿದೆ. ಶಾಲೆಯಲ್ಲೇ ಮಕ್ಕಳು ಸುರಕ್ಷಿತರಾಗಿದ್ದಾರೆ ಎಂಬ ನಂಬಿಕೆಗೆ ಧಕ್ಕೆ ಉಂಟಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬರುತ್ತಿದೆ.
ಬೆಂಗಳೂರು ನಗರದಲ್ಲಿ ಮತ್ತೊಂದು ಮನಕಲಕುವ ಘಟನೆ ಬೆಳಕಿಗೆ ಬಂದಿದ್ದು, 11 ವರ್ಷದ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಆರೋಪಿಯನ್ನು ಪೊಲೀಸರು…
ಚಾಮರಾಜನಗರ ನಗರದ ವಿವಿಧ ಬಡಾವಣೆಗಳಲ್ಲಿ ಕಳೆದ ಕೆಲ ದಿನಗಳಿಂದ ಮಹಿಳೆಯರಲ್ಲಿ ಆತಂಕ ಹುಟ್ಟಿಸಿದ್ದ ವಿಚಿತ್ರ ಕಳ್ಳತನ ಪ್ರಕರಣಕ್ಕೆ ಪೊಲೀಸರು ತೆರೆ…
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ನೀಡಿದ ಶಿಕ್ಷೆ ವಿವಾದಕ್ಕೆ ಕಾರಣವಾಗಿದೆ. ತಮ್ಮ ಸೂಚನೆಗಳನ್ನು…
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ರಾಜ್ಯದಲ್ಲಿ…
ಬೆಂಗಳೂರು ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರೇಮ ವಿಫಲತೆಯಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅಭಿಷೇಕ್…
ಬೆಂಗಳೂರು ನಗರದ ಹುಳಿಮಾವು ಸಮೀಪ ನಡೆದ ದಾರುಣ ಅಪಘಾತದಲ್ಲಿ ಮದುವೆ ಸಿದ್ಧತೆಯಲ್ಲಿ ತೊಡಗಿದ್ದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. 28 ವರ್ಷದ…