Latest

ಮೋದಿಕೇರ್ ದಂಧೆಗೆ ಗುಲಾಮರಾಗಿದ್ದ ಶಿಕ್ಷಕರು ಅಮಾನತು

ಮೋದಿಕೇರ್ ಎಂಬ ಚೈನ್ ಲಿಂಕ್ ಕಂಪನಿಯಲ್ಲಿ ಸಾಕಷ್ಟು ಶಿಕ್ಷಕರು ಕೆಲಸ ಮಾಡುತ್ತಿರುವುದಾಗಿ ಡಿಡಿಪಿಐ ರವರ ಗಮನಕ್ಕೆ ಬಂದಿದ್ದು. ಈ ವಿಚಾರವಾಗಿ 16 ಶಿಕ್ಷಕರಿಗೆ ನೋಟಿಸ್ ನೀಡಲಾಗಿತ್ತು. ವಿಚಾರಣೆಯ ಬಳಿಕ 8 ಶಿಕ್ಷಕರು ಈ ಚೈನ್ ಲಿಂಕ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಸಾಬೀತಾಗಿದ್ದು ಅವರನ್ನು ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ ರವರು ಅಮಾನತು ಮಾಡಿದ್ದಾರೆ.
ಹೊಳಲ್ಕೆರೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ರವಿಕುಮಾರ್, ರಾಮಗಿರಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶ್ರೀನಿವಾಸ್, ಹಿರಿಯೂರು ತಾಲೂಕು ಗುಯಿಲಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಿದ್ದಮ್ಮ, ಪಾಲವನ ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಂದ್ರಾಣಿ, ಹಿಂಡಸಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೈಲಜಾ, ಪರಮೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಂಜುಳಾ ಶ್ರೀನಿವಾಸ್, ರಂಗಪ್ಪ ಹಾಗೂ ಚಿತ್ರದುರ್ಗ ತಾಲೂಕಿನ ದೊಡ್ಡಲಘಟ್ಟದ ಸರಕಾರಿ ಪ್ರೌಢಶಾಲೆಯ ಶಿವಕುಮಾರ್ ಅಮಾನತುಗೊಂಡ ಶಿಕ್ಷಕರು.
ಇವರುಗಳು ಮಾತ್ರವಲ್ಲದೆ ಜಿಲ್ಲೆಯ ಪ್ರಾರ್ಥಮಿಕ ಹಾಗೂ ಪ್ರೌಢಶಾಲೆಯ ಸಾಕಷ್ಟು ಶಿಕ್ಷಕರುಗಳು ಚೈನ್ ಲಿಂಕ್ ಕಂಪನಿಯ ವ್ಯವಹಾರದಲ್ಲಿ ತೊಡಗಿದ್ದು, ಮಕ್ಕಳು ಭವಿಷ್ಯ ರೂಪಿಸಬೇಕಾದಂತಹ ಶಿಕ್ಷಕರುಗಳು ತಮ್ಮ ಕೆಲಸವನ್ನು ದುರುಪಯೋಗ ಪಡಿಸಿಕೊಂಡು ಚೈನ್ ಲಿಂಕ್ ಕಂಪನಿಯ ಆನ್ಲೈನ್ ಸಭೆಗಳಲ್ಲಿ ಭಾಗಿಯಾಗಿ ಅವರುಗಳು ಹೇಳಿದಂತೆಲ್ಲ ಕೇಳಿ ಆ ಕಂಪನಿಯವರ ಗುಲಾಮರಾಗಿದ್ದಾರೆ. ಇದರಿಂದ ಮಕ್ಕಳ ಭವಿಷ್ಯಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ.
ಕೇವಲ 8 ಜನರು ಮಾತ್ರವಲ್ಲದೆ ಜಿಲ್ಲೆಯಲ್ಲಿ ಮತ್ತು ನಮ್ಮ ರಾಜ್ಯದಲ್ಲಿ ಸಾಕಷ್ಟು ಶಿಕ್ಷಕರುಗಳು ಇದರ ಜಾಲಕ್ಕೆ ಬಿದ್ದು ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸುವುದನ್ನೇ ಮರೆತಿದ್ದಾರೆ ಹಾಗೂ ತಮ್ಮ ಕೆಲಸವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ.  ಈ ವಿಚಾರವಾಗಿ ಭ್ರಷ್ಟರ ಬೇಟೆ ಪತ್ರಿಕೆಯು ವೆಬ್ಸೈಟ್ನಲ್ಲಿ ಕೆಲವು ತಿಂಗಳ ಹಿಂದೆಯೇ ವರದಿಯನ್ನು ಮಾಡಿತು. ಹಾಗೂ ಭ್ರಷ್ಟರ ಬೇಟೆ ಪತ್ರಿಕೆಯ ಫೆಬ್ರವರಿ 2023ರ ಸಂಚಿಕೆಯಲ್ಲಿ “ಮೋದಿಕೇರ್ ದಂದೆಗೆ ಗುಲಾಮರಾದ ಶಿಕ್ಷಕರು” ಎಂಬ ಶೀರ್ಷಿಕೆ ಅಡಿಯಲ್ಲಿ ವರದಿಯನ್ನು ಸಹ ಪ್ರಕಟಿಸಿರುತ್ತದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಇವರುಗಳ ವಿರುದ್ಧವು ಸಹ ಶಿಸ್ತು ಕ್ರಮಕ್ಕೆ ಮುಂದಾಗ ಬೇಕಿದೆ.

 

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago