ಪಟ್ಟಣದ “ವಿಜಡಂ ವಿಂಗ್ಸ್ ಇಂಗ್ಲಿಷ್ ಮೀಡಿಯಂ ಶಾಲೆ”ಯ ವಿದ್ಯಾರ್ಥಿಗಳನ್ನು ಇಟಿಗಿ ರಸ್ತೆಯಲ್ಲಿ ಭಾಗಶಃ ಹಂತದಲ್ಲಿರುವ ಕಟ್ಟಡದಲ್ಲಿ ಆಡಳಿತ ಮಂಡಳಿ ತರಗತಿ ಪ್ರಾರಂಭಿಸಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.
ಕಟ್ಟಡದ ಮೂರನೇ ಮಹಡಿ ಕೆಲಸ ನಡೆಯುತ್ತಿದ್ದು ಅದರ ಕೆಳಗೆ ವಿದ್ಯಾರ್ಥಿಗಳ ಆಟ,ಪಾಠ ನಡೆಯುತ್ತಿದೆ.ಮಕ್ಕಳ ಜೀವದ ಮೇಲೆ ಚಲ್ಲಾಟ ಆಡುವ ರೀತಿಯಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಿದೆ.ಈ ವ್ಯವಸ್ಥೆಯನ್ನು ಅವಲೋಕಿಸಿರುವ ಪೋಷಕರಲ್ಲಿ ಭಯ ಆತಂಕ ಆವರಿಸಿದೆ.
ಕಟ್ಟಡ ಕೆಲಸ ಬಾಕಿ ಇರುವಾಗಲೇ ವಿದ್ಯಾರ್ಥಿಗಳನ್ನು ಇಲ್ಲಿಗೆ ಕರೆ ತಂದಿರುವುದು ಆಡಳಿತ ಸಂಸ್ಥೆಯ ಬೇಜವಾಬ್ದಾರಿ ಎತ್ತಿ ತೋರುತ್ತಿದೆ ಎನ್ನುವ ಆರೋಪ ಪೋಷಕರದ್ದು.
ಸರಿಯಾದ ಮೈದಾನವಿಲ್ಲದೆ ಕಲ್ಲು ಕಸದಲ್ಲಿ,ಕಟ್ಟಡ
ಚಟುವಟಿಕೆಗಳನ್ನು ಕೈಗೊಂಡಿರುವ ಅವ್ಯವಸ್ಥೆಯಲ್ಲಿ ಕಲಿಕೆಯನ್ನು ಪ್ರಾರಂಭಿಸಿ ಮಕ್ಕಳ ಭವಿಷ್ಯಕ್ಕೆ ಅಪಾಯ ತಂದೊಡ್ಡುವ ನಿಟ್ಟಿನೊಳೆಗೆ ಆಡಳಿತ ಮಂಡಳಿ ಮುಂದಾಗಿದೆ,ಮಕ್ಕಳ ಭವಿಷ್ಯಕ್ಕಿಂತ ತಮ್ಮ ಶಾಲೆಯ ಕಟ್ಟಡ ಕಟ್ಟುವಂತದ್ದು ಈ ಶಿಕ್ಷಣ ಸಂಸ್ಥೆಗೆ ಪ್ರತಿಷ್ಠೆಯಾಗಿದೆ ಎಂಬ ಆಕ್ರೋಶ ಪೋಷಕರದ್ದು.
ಇಂತಹ ಅವ್ಯವಸ್ಥೆಯಲ್ಲಿ ತರಗತಿಗಳು ಪ್ರಾರಂಭಗೊಂಡಿದ್ದರು ಇಲ್ಲಿನ ಶಿಕ್ಷಣ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿಕುಳಿತಿರುವುದು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯತೆಗೆ ಇಡಿದ ಕೈಗನ್ನಡಿ ಇದಾಗಿದೆ ಎಂಬ ಅಭಿಪ್ರಯ ಪ್ರಜ್ಞಾವಂತ ನಾಗರಿಕರದ್ದು.
ಅವಘಡ ಸಂಭವಿಸುವ ಮುನ್ನ ಶೀಘ್ರ ಸಂಬಂದ ಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸೂಕ್ತ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಬೇಕೆಂದು ಆಗ್ರಹಿಸಿದರು. ವರದಿ :ಮಣಿಕಂಠ ಬಿ
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…