Categories: CrimeLatest

ಆಂಬ್ಯುಲೆನ್ಸ್‌ನಲ್ಲಿ ಭೀಕರ ನಿರ್ಲಕ್ಷ್ಯ: ಹೆರಿಗೆ ವೇಳೆ ಶಿಶುವಿನ ದೇಹ-ತಲೆ ಬೇರ್ಪಟ್ಟು ಸಾವು- ಗರ್ಭದಲ್ಲೇ ಉಳಿದ ತಲೆ..!

ವೈದ್ಯಕೀಯ ಕ್ಷೇತ್ರವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಆಂಬ್ಯುಲೆನ್ಸ್ ಸಿಬ್ಬಂದಿಯ ನಿರ್ಲಕ್ಷ್ಯ ಮತ್ತು ಅತಿಯಾದ ಆತ್ಮವಿಶ್ವಾಸದಿಂದ ಏಳು ತಿಂಗಳ ಗರ್ಭಿಣಿಯ ಶಿಶು ದಾರುಣವಾಗಿ ಮೃತಪಟ್ಟಿದ್ದು, ಮಗುವಿನ ತಲೆ ತಾಯಿಯ ಗರ್ಭದಲ್ಲೇ ಉಳಿದ ಭೀಕರ ಘಟನೆ ಬೆಳಕಿಗೆ ಬಂದಿದೆ.

ಏಳು ತಿಂಗಳ ಗರ್ಭಿಣಿ ಪ್ರೇಮಾ ದೇವಿಗೆ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಕುದ್ರಾಹಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗುತ್ತಿತ್ತು. ಆಸ್ಪತ್ರೆ ತಲುಪಲು ಕೆಲವೇ ನಿಮಿಷಗಳು ಬಾಕಿ ಇರುವಾಗಲೇ ನೋವು ತೀವ್ರಗೊಂಡಿದೆ.

ಈ ಸಂದರ್ಭದಲ್ಲಿ ಆಂಬ್ಯುಲೆನ್ಸ್‌ನಲ್ಲಿದ್ದ ಆಶಾ ಕಾರ್ಯಕರ್ತೆ, ವೈದ್ಯರನ್ನು ಕಾಯದೇ ತಾನೇ ಹೆರಿಗೆ ಮಾಡಿಸಲು ಮುಂದಾಗಿದ್ದಾಳೆ. ಮಹಿಳೆಗೆ ನೋವು ನಿವಾರಕ ಇಂಜೆಕ್ಷನ್ ನೀಡಿ, ಬಲವಂತವಾಗಿ ಸಾಮಾನ್ಯ ಹೆರಿಗೆ ನಡೆಸಲು ಪ್ರಯತ್ನಿಸಿದ್ದಾಳೆ. ಆದರೆ ಹೆರಿಗೆ ವೇಳೆ ಮಗುವಿನ ದೇಹ ಹೊರಬಂದರೂ, ತಲೆ ಗರ್ಭದೊಳಗೆ ಸಿಲುಕಿಕೊಂಡಿದೆ. ಬಲವಂತವಾಗಿ ಎಳೆಯುವ ಪ್ರಯತ್ನದಲ್ಲಿ ಮಗುವಿನ ದೇಹ ಮತ್ತು ತಲೆ ಬೇರ್ಪಟ್ಟು, ದೇಹ ಮಾತ್ರ ಹೊರಬಂದ ದಾರುಣ ಪರಿಸ್ಥಿತಿ ಉಂಟಾಗಿದೆ.

ತಮ್ಮ ತಪ್ಪಿನಿಂದ ಮಗು ಮೃತಪಟ್ಟಿರುವುದನ್ನು ಕಂಡ ಸಿಬ್ಬಂದಿ, ಸತ್ಯವನ್ನು ಮರೆಮಾಚಲು ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿ ಖಾಸಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ನಂತರ ಅವರನ್ನು ಜಿಲ್ಲಾ ವೈದ್ಯಕೀಯ ಕಾಲೇಜಿಗೆ ರವಾನಿಸಲಾಯಿತು.

ಜಿಲ್ಲಾಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ಪರೀಕ್ಷೆ ನಡೆಸಿದ ವೈದ್ಯರು ತಾಯಿಯ ಗರ್ಭದೊಳಗೆ ಮಗುವಿನ ತಲೆ ಉಳಿದಿರುವುದನ್ನು ಕಂಡು ಬೆಚ್ಚಿಬಿದ್ದರು. ತಕ್ಷಣವೇ ತುರ್ತು ಶಸ್ತ್ರಚಿಕಿತ್ಸೆ ನಡೆಸಿ ತಲೆಯನ್ನು ಹೊರತೆಗೆದಿದ್ದಾರೆ. ಸದ್ಯ ತಾಯಿ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಆಶಾ ಕಾರ್ಯಕರ್ತೆ ಹಾಗೂ ಆಂಬ್ಯುಲೆನ್ಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಇನ್ನೂ ಕಠಿಣ ಕ್ರಮ ಕೈಗೊಳ್ಳದ ಜಿಲ್ಲಾಡಳಿತದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

13 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

18 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago