ಉತ್ತರ ಕನ್ನಡ ಜಿಲ್ಲೆಯ ಶಿರಸಿಯ 1ನೇ ಹೆಚ್ಚುವರಿ ಸತ್ರ ನ್ಯಾಯಾಲಯವು, ಉಗ್ರಗಾಮಿಗಳೊಂದಿಗೆ ಸಂಪರ್ಕ ಹೊಂದಿದ್ದನೆಂಬ ಶಂಕೆ ಎದುರಿಸುತ್ತಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಮೌಸಿನ್ ಶುಕುರ್ ಅನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಆದೇಶ ನೀಡಿದೆ. ನ್ಯಾಯಾಲಯದ ಆದೇಶದ ನಂತರ, ಮೌಸಿನ್ ನನ್ನು ಬೆಳಗಾವಿಯ ಹಿಂಡಲಗಾ ಕಾರಾಗೃಹಕ್ಕೆ ಸ್ಥಳಾಂತರಿಸಲು ಪೊಲೀಸರು ಸಜ್ಜುಗೊಂಡಿದ್ದಾರೆ.
ಈತನ ವಿರುದ್ಧ ಈಗಾಗಲೇ ಒಂದರ ಕುರಿತು ನ್ಯಾಯಾಂಗ ಬಂಧನ ನೀಡಲಾಗಿದೆ. ಇದಲ್ಲದೇ, ಮೌಸಿನ್ ವಿರುದ್ಧ ಉತ್ತರ ಕನ್ನಡ, ಬೆಂಗಳೂರು ಹಾಗೂ ಮಂಗಳೂರು ಭಾಗಗಳಲ್ಲಿ ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದು, ಇವುಗಳ ವಿಚಾರಣೆಗಾಗಿ ಬಾಡಿ ವಾರಂಟ್ ಆಧಾರದಲ್ಲಿ ಆತನನ್ನು ಮತ್ತೆ ಕಸ್ಟಡಿಗೆ ಪಡೆಯಲು ಪೊಲೀಸರು ಕ್ರಮ ಆರಂಭಿಸಿದ್ದಾರೆ.
ಮೌಸಿನ್ ಕೇವಲ ಗಂಭೀರ ಅಪರಾಧಗಳಲ್ಲಿ ಮಾತ್ರ ತೊಡಗಿಸಿಕೊಳ್ಳದೆ, ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಮಹತ್ವದ ಮಾಹಿತಿ ಕೂಡ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮೌಸಿನ್ ಮೇಲೆ ಹೆಚ್ಚಿನ ವಿಚಾರಣೆ ನಡೆಸಲು ತಯಾರಾಗಿದ್ದು, ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ಸಿಕ್ಕಿದೆ.
ಅಷ್ಟೇ ಅಲ್ಲದೆ, ಮೌಸಿನ್ ಶೃಂಗದಜಾಲದ ತನಿಖೆಯಲ್ಲಿ, ಆತನ ತಾಯಿ ಮತ್ತು ಸಹೋದರರನ್ನೂ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…