Latest

ನವೆಂಬರ್ 6ರಂದು ಟಿ.ಇ.ಟಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ನಿಷೇಧಾಜ್ಞೆ ಜಾರಿ

ಕಲಬುರಗಿ – ಪ್ರಸಕ್ತ 2022 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯು (ಟಿ.ಇ.ಟಿ) ನವೆಂಬರ್ 6 ರಂದು ರವಿವಾರ ಕಲಬುರಗಿ ನಗರದ 62 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ಪ್ರದೇಶದ ಸುತ್ತಮತ್ತಲೂ (ಕಲಂ 144ರನ್ವಯ) ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಸಕ್ರೆಪ್ಪಗೌಡ ಬಿರಾದಾರ ಅವರು ತಿಳಿಸಿದ್ದಾರೆ.
ಪರೀಕ್ಷೆಗೆ ಆಗಮಿಸುವ ಅಭ್ಯರ್ಥಿಗಳು ಶೂ ಮತ್ತು ಬೆಲ್ಟ ಧರಿಸಿ ಬರುವುದನ್ನು ನಿಷೇಧಿಸಲಾಗಿದ್ದು, ಪ್ರವೇಶ ಪತ್ರದಲ್ಲಿ ತಮ್ಮ ಸಹಿ ಮತ್ತು ಭಾವಚಿತ್ರ ಪ್ರಕಟವಾಗದಿರುವ ಅಥವಾ ಸಹಿ ಮತ್ತು ಭಾವಚಿತ್ರ ವ್ಯತ್ಯಾಸ ಕಂಡುಬಂದ ಅಭ್ಯರ್ಥಿಗಳು ತಮ್ಮೊಂದಿಗೆ ಆನ್‍ಲೈನ್ ಅರ್ಜಿ, ತಮ್ಮ ಇತ್ತೀಚಿನ ಭಾವಚಿತ್ರ ಮತ್ತು ಆಧಾರ ಕಾರ್ಡ್ ಅಥವಾ ಮತ್ತಿತರ ಅಧಿಕೃತ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರದ ಅಧಿಕಾರಿಗಳಿಗೆ ಕಡ್ಡಾಯವಾಗಿ ತೋರಿಸಬೇಕು. ಎಲೆಕ್ಟ್ರಾನಿಕ್ಸ ಯಾವುದೇ ಯಂತ್ರಗಳನ್ನು ಪರೀಕ್ಷಾ ಕೇಂದ್ರದಲ್ಲಿ ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಅಭ್ಯರ್ಥಿಗಳು ಪರೀಕ್ಷೆಗೆ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
ಅಧಿವೇಶನ-1 ಪತ್ರಿಕೆ ಅಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 46 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಅಧಿವೇಶನ-2 ಪತ್ರಿಕೆ ಅಂದು ಮಧ್ಯಾಹ್ನ 2 ರಿಂದ ಸಾಯಂಕಾಲ 4.30 ಗಂಟೆಯವರೆಗೆ 62 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 16,984 ಜನ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 62 ಪರೀಕ್ಷಾ ಕೇಂದ್ರಗಳಿಗೆ 18 ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಈ ಕೆಳಕಂಡ ಪರೀಕ್ಷಾ ಕೇಂದ್ರಗಳ ವಿಳಾಸ ಕುರಿತು ಡಿ.ಡಿ.ಪಿ.ಐ. ಇವರಿಂದ ಸ್ಪಷ್ಟೀಕರಣ: ಪರೀಕ್ಷಾ ಕೇಂದ್ರ ಸಂಖ್ಯೆ 34ರ ಸರಿಯಾದ ವಿಳಾಸ ಸರ್ವಜ್ಞ ಪ್ರೌಢಶಾಲೆ ಸಾಯಿ ಮಂದಿರ ರೋಡ ಕಲಬುರಗಿ, ಪರೀಕ್ಷಾ ಕೇಂದ್ರ ಸಂಖ್ಯೆ 47ರ ಸಂಗಮ ಪ್ರೌಢಶಾಲೆಯ ಸರಿಯಾದ ವಿಳಾಸ ಸಂಗಮ ಪ್ರೌಢಶಾಲೆ ಮಹಾಲಕ್ಷ್ಮೀ ಲೇಔಟ್ ಹುಮನಾಬಾದ ರಿಂಗ್ ರೋಡ ಕಲಬುರಗಿ, ಪರೀಕ್ಷಾ ಕೇಂದ್ರ ಸಂಖ್ಯೆ 49ರ ಸರಿಯಾದ ವಿಳಾಸ ನ್ಯಾಷನಲ್ ಉರ್ದು ಬಾಲಕರ ಪ್ರೌಢ ಶಾಲೆ ಹಫ್ತ ಗುಂಬಜ ಕಲಬುರಗಿ, ಪರೀಕ್ಷಾ ಕೇಂದ್ರ ಸಂಖ್ಯೆ 50ರ ಸರಿಯಾದ ವಿಳಾಸ ನ್ಯಾಷನಲ್ ಪದವಿ ಪೂರ್ವ ಕಾಲೇಜು ಹಫ್ತ ಗುಂಬಜ ಕಲಬುರಗಿ ಹಾಗೂ ಪರೀಕ್ಷಾ ಕೇಂದ್ರ ಸಂಖ್ಯೆ 62ರ ಸರಿಯಾದ ವಿಳಾಸ ನ್ಯೂಟನ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಪಟೇಲ್ ಕಾಲೋನಿ ಎಂ.ಎಸ್.ಕೆ.ಮಿಲ್. ರಸ್ತೆ ಜಾಫರಾಬಾದ ಕಲಬುರಗಿ.
ವರದಿ ನಾಗರಾಜ್ ಗೊಬ್ಬುರ್

ಭ್ರಷ್ಟರ ಬೇಟೆ

Recent Posts

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

3 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

1 day ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

1 day ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

1 day ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

1 day ago

10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರು ಆರೋಪಿಗಳಿಗೆ ಪೊಲೀಸರ ಗುಂಡೇಟು

ಜಮುಯಿ: ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ…

1 day ago