ಆರೋಪಿತರಾದ ದರ್ಶನ್ ಅಶೋಕ್ ನಾಯ್ಕ ಗಣೇಶ್ ರವರುಗಳು ನೊಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಹುಳಿಯಾರು ಪೊಲೀಸ್ ಠಾಣಾ ಮೊ,ನಂ 162/2022 ಕಾಲಂ 376, 506, ರೆ/ವಿ 34 ಐಪಿಸಿ ಜೊತೆಗೆ ಕಾಲ 04 ಮತ್ತು 06 ಪೋಕ್ಸೋ ಕಾಯ್ದೆ 2012 ರ ರೀತ್ಯ ಪ್ರಕರಣವನ್ನು ದಾಖಲು ಮಾಡಿದ್ದು, ಚಿಕ್ಕನಾಯಕನಹಳ್ಳಿ ವೃತ್ತದ ಅಂದಿನ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ನಿರ್ಮಲ ವಿ, ರವರು ತನಿಖೆ ಕೈಗೊಂಡು ಪ್ರಕರಣದ ಆರೋಪಿತರಾದ ಅಶೋಕ್ ನಾಯ್ ಗಣೇಶ್ ಬಿನ್ ಧನಂಜಯ ನಾಯ್ 24 ವರ್ಷ ದೊಡ್ಡಬಿದರೆ ಹೊಸಹಟ್ಟಿ ತಾಂಡ್ಯ, ಹುಳಿಯಾರು ಹೋಬಳಿ ಚಿಕ್ಕನಾಯಕನಹಳ್ಳಿ ತಾಲೂಕು, ಹಾಗೂ ದರ್ಶನ್ ಬಿನ್ ಮಂಜುನಾಥ್ 26 ವರ್ಷ ವರದಾಪುರದ ಕಟ್ಟೆ ಹುಳಿಯಾರು ಹೋಬಳಿ ಚಿಕ್ಕನಾಯಕನಹಳ್ಳಿ ತಾಲೂಕು, ರವರುಗಳನ್ನು ದಸ್ತಗಿರಿ ಮಾಡಿ ತನಿಖೆಯನ್ನು ಸಂಪೂರ್ಣಗೊಳಿಸಿ ಆರೋಪಿತರುಗಳ ವಿರುದ್ಧ ಘನ ನಾಯಾಲಯಕ್ಕೆ ದೋಷಾರೂಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಕರಣವು ತುಮಕೂರು ಜಿಲ್ಲಾ FTSC-01 ಘನ ನ್ಯಾಯಾಲಯದಲ್ಲಿ ಸ್ಪೆಷಲ್ ಸಿಸಿ ನಂಬರ್ 782/2022 ರಲ್ಲಿ ವಿಚಾರಣೆ ನಡೆದು ಆರೋಪಿ-01 ಅಶೋಕ್ ನಾಯ್ ಗಣೇಶ್ ರವರ ಆರೋಪ
ಖುಲಾಸೆಗೊಂಡು ಆರೋಪಿ-02 ದರ್ಶನ್ ರವರ ವಿರುದ್ಧ ಆರೋಪ ಸಾಬೀತಾದ ಹಿನ್ನಲೆಯಲ್ಲಿ ದಿನಾಂಕ 22-05-2025 ರಂದು ಪ್ರಕರಣದ ಎ-2 ಆರೋಪಿ ದರ್ಶನ್ ರವರಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷದ 50 ಸಾವಿರ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿರುತ್ತೆ ಈ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್ ರವರು ವಾದ ಮಂಡಿಸಿರುತ್ತಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…