Categories: CrimeLatest

ಬೆಂಗಳೂರಿನ ಪೊಲೀಸರೇ ತಲೆತಗ್ಗಿಸುವ ಕೆಲಸ, ಪೊಲೀಸರೇ ಅರೆಸ್ಟ್ : ಸಿಐಡಿ ಜೀಪ್‌ನಲ್ಲಿ ಬಂದು ₹20 ಲಕ್ಷ ದರೋಡೆ

ಬೆಂಗಳೂರು ನಗರದಲ್ಲಿ ಪೊಲೀಸರ ಮೇಲೆಯೇ ದರೋಡೆ ಆರೋಪ ಕೇಳಿಬಂದಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣವು ರಾಜ್ಯ ಪೊಲೀಸ್ ಇಲಾಖೆಯ ವಿಶ್ವಾಸಾರ್ಹತೆಯ ಮೇಲೆಯೇ ಪ್ರಶ್ನೆ ಮೂಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಮಾಹಿತಿಯ ಪ್ರಕಾರ, ಕೇರಳ ಮೂಲದ ಕೆಲ ಯುವಕರು ಬೆಂಗಳೂರಿನ ಹೋಟೆಲ್‌ನಲ್ಲಿ ತಂಗಿದ್ದು, ಅವರ ಬಳಿ ಸುಮಾರು ₹20 ಲಕ್ಷ ನಗದು ಹಣ ಇತ್ತು ಎನ್ನಲಾಗಿದೆ. ಈ ವೇಳೆ ಸಿಐಡಿ ಪೊಲೀಸ್ ಜೀಪ್‌ನಲ್ಲಿ ಬಂದ ಕೆಲವರು ತಮ್ಮನ್ನು ಪೊಲೀಸರು ಎಂದು ಪರಿಚಯಿಸಿಕೊಂಡು, ಪೊಲೀಸ್ ಐಡಿ ಕಾರ್ಡ್ ತೋರಿಸಿ ಹೋಟೆಲ್‌ಗೆ ಪ್ರವೇಶಿಸಿದ್ದಾರೆ.

ಬಳಿಕ ಯುವಕರ ಬಳಿ ಇದ್ದ ಹಣವನ್ನು ವಶಪಡಿಸಿಕೊಳ್ಳುವ ನೆಪದಲ್ಲಿ ತೆಗೆದುಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಘಟನೆಯ ಸಂಪೂರ್ಣ ದೃಶ್ಯವನ್ನು ಕೇರಳ ಮೂಲದ ಯುವಕರು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ನಂತರ ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣದ ಗಂಭೀರತೆಯನ್ನು ಮನಗಂಡು ತನಿಖೆ ಆರಂಭಿಸಿದ ಡಿಸಿಪಿ ಮಹಮ್ಮದ್ ಸಜಿತ್ ಹಾಗೂ ಅವರ ತಂಡ ಒಬ್ಬ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ವೇಳೆ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಬಂಧಿತ ಆರೋಪಿಯ ಹೇಳಿಕೆಯ ಪ್ರಕಾರ, “ಅಸಲಿ ಪೊಲೀಸ್ ಇನ್ಸ್‌ಪೆಕ್ಟರ್ ಕಾರಿನಲ್ಲೇ ಇದ್ದರು. ನಾವು ಹೋಗಿ ಹಣ ತೆಗೆದುಕೊಂಡು ಬಂದೆವು” ಎಂದು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಕಮಿಷನರ್ ಕೂಡ ಪ್ರಕರಣದಲ್ಲಿ ಸತ್ಯಾಂಶ ಇರುವುದನ್ನು ಒಪ್ಪಿಕೊಂಡಿದ್ದು, ಆರೋಪ ಎದುರಿಸುತ್ತಿರುವ ಇನ್ಸ್‌ಪೆಕ್ಟರ್ ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿ ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆಯ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಭ್ರಷ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾ ಮಾಡಿ ಕಠಿಣ ಕ್ರಮ ಕೈಗೊಳ್ಳಬೇಕು. ಕೆಲವರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡರೆ ಇತರರಿಗೆ ಎಚ್ಚರಿಕೆ ಆಗುತ್ತದೆ” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪೊಲೀಸರ ಮೇಲೆಯೇ ಇಂತಹ ಗಂಭೀರ ಆರೋಪ ಕೇಳಿಬಂದಿರುವುದು ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಆತಂಕ ಹೆಚ್ಚಿಸಿದ್ದು, ತನಿಖೆಯ ಅಂತಿಮ ವರದಿಯತ್ತ ಎಲ್ಲರ ಗಮನ ಸೆಳೆದಿದೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

40 minutes ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

21 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago