ಸಿಂದಗಿ: ತಾಲೂಕಿನ ಹೊನ್ನಳ್ಳಿ ಗ್ರಾಮದ 9 ವರ್ಷದ ಬಾಲಕನ ಶವ ಯರಗಲ್ ಹತ್ತಿರದ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಹಿನ್ನೆಲೆ: ಬಾಲಕ ಕಾಲುವೆಗೆ ಬಿದ್ದ ಘಟನೆ ಭಾನುವಾರ ನಡೆಡಿದ್ದು. ತಾಯಿ ಬಟ್ಟೆ ತೊಳೆಯಲು ಹೋದಾಗ ಬಾಲಕ ಸಿದ್ದಪ್ಪ ದೇವೇಂದ್ರ ಹುಣಶ್ಯಾಳ ತಾಯಿಯನ್ನು ಹಿಂಬಾಲಿಸಿಕೊಂಡು ಹೋಗಿದ್ದಾನೆ. ಮನೆಗೆ ಹೋಗು ಎಂದು ತಾಯಿ ಹೇಳಿದರೂ ಕೇಳದೆ ಈಜುತ್ತೇನೆಂದು ಕಾಲುವಿಗೆ ಜಿಗಿದಿದ್ದಾನೆ ಎಂದು ಹೇಳಲಾಗುತ್ತಿದ್ದು,
ಹೊನ್ನಳ್ಳಿ ಗ್ರಾಮದ ದೇವೇಂದ್ರ ಹುಣಶ್ಯಾಳ ಹಾಗೂ ಲಲಿತಾ ಎಂಬುವರ ಏಕೈಕ ಮಗನಾಗಿದ್ದಾನೆ. ಈ ದಂಪತಿಗೆ ಐವರು ಪುತ್ರಿಯರಿದ್ದಾರೆ. ಬಟ್ಟೆ ತೊಳೆಯಲು ಹೋದ ಸಂದರ್ಭದಲ್ಲಿ ಈ ಅನಾಹುತ ನಡೆದಿದ್ದು, ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ
.ಅಗ್ನಿಶಾಮಕ ಸಿಬ್ಬಂದಿ ನಿರಂತರ ಶೋಧ ಕಾರ್ಯ ನಡೆಸಿ ಕಳೆದ ಎರಡ್ಮೂರು ದಿನಗಳಿಂದ ಮಳೆಯಾಗಿದ್ದು ನೀರಿನ ಹರಿವು ಹೆಚ್ಚಾಗಿ ಇರುವುದರಿಂದ ಬಾಲಕನ ಪತ್ತೆ ಕಾರ್ಯ ತುಂಬಾ ಕಷ್ಟವಾಗಿದೆ ಎಂದು ತಿಳಿಸಿದ್ದರು.
ಕೊನೆಗೆ ಯರಗಲ್ಲ ಹತ್ತಿರದ ಕಾಲುವೆಯಲ್ಲಿ ಬಾಲಕನ ಶವ ಪತ್ತೆಯಾಗಿತ್ತು ಕಲಕೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು. ಬಾಲಕನ ಮನೆಯವರಿಗೆ ಹಸ್ತಾಂತರಿಸಿದ್ದಾರೆ. ವರದಿ: ದಾವಲಸಾಬ ಬನ್ನೆಟ್ಟಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…