ಬಿಹಾರದ ವರನೊಬ್ಬ ಕಂಠಪೂರ್ತಿ ಕುಡಿದು ಮರುದಿನ ಮದುವೆಗೆ ಹಾಜರಾಗಲು ಮರೆತಿರುವ ವಿಲಕ್ಷಣ ಘಟನೆ ನಡೆದಿದೆ. ಭಾಗಲ್ಪುರದ ಸುಲ್ತಂಗಂಜ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದುವೆಯ ಹಿಂದಿನ ರಾತ್ರಿ ಖುಷಿಯಲ್ಲಿ ವರ ಮದ್ಯ ಸೇವಿಸಿದ್ದ. ಆದರೆ ಮರುದಿನ ಮದ್ಯದ ಅಮಲಿನಲ್ಲಿ ತನ್ನ ಮದುವೆಯಿದೆ ಎಂಬುದನ್ನ ಮರೆತು ಮದುವೆಗೆ ಗೈರಾಗಿದ್ದಾನೆ.
ಮದುವೆ ಸ್ಥಳದಲ್ಲಿ ವಧು ಮತ್ತು ಆಕೆಯ ಕುಟುಂಬದವರು ವರನಿಗಾಗಿ ಕಾಯುತ್ತಿದ್ದರೂ ಆತ ಬಂದಿರಲಿಲ್ಲ. ಅದಾದ ಒಂದು ದಿನದ ನಂತರ ವರನಿಗೆ ಪ್ರಜ್ಞೆ ಬಂದು ವಧುವಿನ ಮನೆಗೆ ಬಂದಿದ್ದಾನೆ. ಈ ವೇಳೆ ವಧು ನನಗೆ ನೀನು ಬೇಡ ಎಂದು ಮದುವೆಯಾಗಲು ನಿರಾಕರಿಸಿದ್ದಾಳೆ.
ಅಷ್ಟೇ ಅಲ್ಲದೇ ತನ್ನ ಜವಾಬ್ದಾರಿಯನ್ನು ಅರ್ಥ ಮಾಡಿಕೊಳ್ಳದ ವ್ಯಕ್ತಿಯೊಂದಿಗೆ ಜೀವನ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾಳೆ. ವಧುವಿನ ಮನೆಯವರು ಕೂಡ ವರನ ಕುಟುಂಬಕ್ಕೆ ಮದುವೆಯ ವ್ಯವಸ್ಥೆಗೆ ಖರ್ಚು ಮಾಡಿದ ಹಣವನ್ನು ಹಿಂದಿರುಗಿಸುವಂತೆ ಒತ್ತಾಯಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…