Latest

ಮೇವು ತರಲು ಹೊಲಕ್ಕೆ ಹೋದವನು ಸುಟ್ಟ ಆಸ್ತಿ ಪಂಜರವಾಗಿ ಪತ್ತೆ; ಹೆಸ್ಕಾಂ ವಿರುದ್ಧ ದಾಖಲಾಯಿತು ಪ್ರಕರಣ!

ಖಾನಾಪುರ: ಸೆಪ್ಟೆಂಬರ್ 12ರಂದು ಹಸುಗಳಿಗೆ ಮೇವು ತರಲು ಮನೆಯವರಿಗೆ ತಿಳಿಸಿ ರಾಮಚಂದ್ರ ಎಂಬಾತ ಹೊಲಕ್ಕೆ ತೆರಳಿರುತ್ತಾನೆ. ಎಷ್ಟೊತ್ತಾದರೂ ಮನೆಗೆ ಮರಳದ ಕಾರಣ ಎಲ್ಲಾ ಕಡೆ ಹುಡುಕಿ ಮನೆಯವರು ಖಾನಾಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಿರುತ್ತಾರೆ.
ಅಕ್ಟೋಬರ್ 6ನೇ ತಾರೀಕು ಕೃಷಿ ಕಾರ್ಮಿಕರು ಜಮೀನುಗಳಿಗೆ ಕೆಲಸ ಮಾಡಲು ಹೋಗಿದ್ದಂತಹ ಸಂದರ್ಭದಲ್ಲಿ ವ್ಯಕ್ತಿ ಸುಟ್ಟು ಕರಕಲಾಗಿ ಬಿದ್ದಿರುವಂತದು ಕಂಡುಬರುತ್ತದೆ ಇದನ್ನು ಕಂಡ ಕೃಷಿ ಕಾರ್ಮಿಕರು ಖಾನಾಪುರ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸುತ್ತಾರೆ.
ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿ, ಇದು ಹೊಲಕ್ಕೆ ಮೇವು ತರಲು ಬಂದಿದ್ದಂತಹ ರಾಮಚಂದ್ರ ಎಂದು ಖಚಿತಪಡಿಸುತ್ತಾರೆ.
ಮೇವು ತರಲು ಹೋದಂತಹ ವ್ಯಕ್ತಿ ವಿದ್ಯುತ್ ಸ್ಪರ್ಶದಿಂದ ಸುಟ್ಟು ಕರಕಲಾಗಿದ್ದು ದೇಹ ಮತ್ತು ತಲೆ ಬೇರೆ ಬೇರೆ ಕಡೆ ಬಿದ್ದಿರುತ್ತವೆ.  ಗ್ರಾಮದಿಂದ ದೂರದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಇಂತಹ ಘಟನೆ ನಡೆದಿರುವ ಕಾರಣ ತಡವಾಗಿ ಬೆಳಕಿಗೆ ಬಂದಿರುತ್ತದೆ.
ರಾಮಚಂದ್ರನ ಕುಟುಂಬದವರು ಇದಕ್ಕೆಲ್ಲ ಎಸ್ಕಾಂ ಕಾರಣ ಹಲವು ಬಾರಿ ಗ್ರಾಮದ ಜನರು ದೂರನ್ನು ನೀಡಿದರು ಸಹ ವಿದ್ಯುತ್ ತಂತಿಗಳನ್ನು ಸರಿಪಡಿಸದೆ ಎಲ್ಲೆಂದರಲ್ಲಿ ಬಿಟ್ಟಿದ್ದರು ಅದಕ್ಕಾಗಿ ಈ ರೀತಿ ಆಗಿರುವುದು ಎಂದು ದೂರಿದ್ದಾರೆ.
ಸದ್ಯ ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಸ್ಕಾಂನ ಖಾನಾಪುರ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿರುದ್ಧ ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago