ನ್ಯ ಜಾತಿಯ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿರುವ ಘಟನೆ ಬಳ್ಳಾರಿಯ ಕುಡುತಿನಿ ಪಟ್ಟಣದ ಸಿದ್ದಮ್ಮನಹಳ್ಳಿಯಲ್ಲಿ ನಡೆದಿದೆ.

ಮಗಳು ಗ್ರಾಮದ ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು. ಈ ಬಗ್ಗೆ ಮನೆಯವರಿಗೆ ಗೊತ್ತಾಗುತ್ತಿದ್ದಂತೆಯೇ ಯುವಕನಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದರು. ಆದ್ರು ಯುವತಿ ಯುವಕನೊಡನೆ ಪ್ರೀತಿ ಒಡನಾಟ ಮುಂದುವರೆಸುತ್ತಿದ್ದಳು ಎಂದು ತಂದೆ ಶಂಕಿಸಿದ.

ಅ. 31ರಂದು  ಮಧ್ಯಾಹ್ನ ಮಗಳನ್ನು ಸಿನಿಮಾ ತೋರಿಸುವುದಾಗಿ ಪುಸಲಾಯಿಸಿ ಓಂಕಾರಗೌಡ ಬೈಕ್‌ನಲ್ಲಿ ಮನೆಯಿಂದ ಕರೆದೊಯ್ದ. ಚಿತ್ರಮಂದಿರದ ಬಳಿ ಹೋದಾಗ ಸಿನಿಮಾ ಆರಂಭವಾಗಿತ್ತು. ಅಲ್ಲಿಂದ ಹೋಟೆಲ್​ಗೆ ಕರೆದೊ‌ಯ್ದು ತಿಂಡಿ ತಿನ್ನಿಸಿ, ದೊಡ್ಡ ಬಸವೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿಸಿದ. ಆಭರಣದ ಅಂಗಡಿಯಲ್ಲಿ ಒಂದು ಜತೆ ಓಲೆ, ಉಂಗುರವನ್ನು ಮಗಳಿಗೆ ಕೊಡಿಸಿದ.

ಊರಿಗೆ ಹಿಂತಿರುಗುವ ಹೊತ್ತಿಗೆ ರಾತ್ರಿಯಾಗಿತ್ತು. ಹೆಚ್‌ಎಲ್‌ಸಿ ಕಾಲುವೆ ಬಳಿಗೆ ಮಗಳ ಕರೆತಂದು, ಸ್ವಲ್ಪ ಹೊತ್ತು ಇಲ್ಲೇ ನಿಂತಿರುವ ಕೆಲಸವಿದೆ ಮುಗಿಸಿ ಬರುತ್ತೇನೆ ಎಂದು ಹೇಳಿ ತಂದೆ ಕಣ್ಮರೆಯಾದ. ಆನಂತರ ಹಿಂದಿನಿಂದ ಬಂದು ಕಾಲುವೆಗೆ ತಳ್ಳಿದ. ಬಾಲಕಿ ನೀರಿನಲ್ಲಿ ಕೊಚ್ಚಿಕೊಂಡು ಹೋದಳು. ಆನಂತರ ಈತ ಬೈಕ್‌ ಅನ್ನು ತನ್ನ ಗೆಳೆಯ ಭೀಮಪ್ಪನ ಮನೆಯಲ್ಲಿ ಬಿಟ್ಟು ತಿರುಪತಿಗೆ ರೈಲು ಹತ್ತಿದ. ನವೆಂಬರ್‌ 1ರಂದು ಬಾಲಕಿ ತಾಯಿ ಗಂಡ ಹಾಗೂ ಪುತ್ರಿ ಕಾಣೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ತಿರುಪತಿ ದರ್ಶನ ಮುಗಿಸಿ ವಾಪಸ್‌ ಬರುವಾಗ ಕೊಪ್ಪಳದ ಬಳಿ ಓಂಕಾರಗೌಡನನ್ನು ಬಂಧಿಸಲಾಯಿತು ಎಂದು ಪೊಲೀಸರು ವಿವರಿಸಿದ್ದಾರೆ. ತನ್ನ ಮಗಳನ್ನು ತಾನೇ ಹತ್ಯೆ ಮಾಡಿರುವುದಾಗಿ ತಂದೆ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ.

ಆರೋಪಿಯು ಮಗಳ ಹೆಸರಿನಲ್ಲಿ ₹ 20 ಲಕ್ಷ ಬ್ಯಾಂಕಿನಲ್ಲಿ ಇಟ್ಟಿದ್ದ. ಕೊಲೆ ಮಾಡುವ ಮೊದಲು ಅದನ್ನು ಆರೋಪಿ ಗೆಳೆಯನ ಸಹಾಯದಿಂದ ವರ್ಗಾವಣೆ ಮಾಡಿಕೊಂಡಿದ್ದ ಎಂಬ ಸಂಗತಿಯೂ ವಿಚಾರಣೆಯಿಂದ ಗೊತ್ತಾಗಿದೆ.

 

Related News

error: Content is protected !!