ಗೌರಿಬಿದನೂರು: ನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ, ಸುಮಾರು ₹10 ಲಕ್ಷ ಬೆಲೆ ಬಾಳುವ 10 ದ್ವಿಚಕ್ರ
ವಾಹನ, ₹67 ಸಾವಿರ ಬೆಲೆ ಬಾಳುವ 420 ಕೆ.ಜಿ ಒಣಮೆಣಸಿನಕಾಯಿಯನ್ನು ಶುಕ್ರವಾರ ವಶಪಡಿಸಿಕೊಂಡಿದ್ದಾರೆ.
ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಆಟೊನಗರ ನಿವಾಸಿ ಚೆಲ್ಲಾ ಸೋಮಶಂಕರ (22), ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದ ವಿನೋದ್ ಕುಮಾರ್ (23) ಬಂಧಿತ ಆರೋಪಿಗಳು.
ಪೊಲೀಸರು ನಗರದಲ್ಲಿ ಗಸ್ತು ಮಾಡುತ್ತಿದ್ದಾಗ ಗುಂಡಾಪುರ ಕಡೆಯಿಂದ ದ್ವಿಚಕ್ರ ವಾಹನದಲ್ಲಿ
ಅನುಮಾನಾಸ್ಪದವಾಗಿ ಚಲಿಸುತ್ತಿದ್ದ ಚೆಲ್ಲಾ ಸೋಮಶಂಕರನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಕಳ್ಳತನ ಮಾಡಿದ್ದ ವಾಹನಗಳ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಬಳಿಕ ಮತ್ತೊಬ್ಬ ಆರೋಪಿ ವಿನೋದ್ ಕುಮಾರ್‌ನನ್ನು ಬಂಧಿಸಿ ಕಳ್ಳತನ ಮಾಡಿದ್ದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಪಿಐ ಅಂಜನ್ ಕುಮಾರ್ ತಿಳಿಸಿದ್ದಾರೆ.
ವರದಿ: ಅವಿನಾಶ್
