Categories: CrimeLatest

ತಮ್ಮ ಮದುವೆಯಾಗಬೇಕಿದ್ದ ಹುಡುಗಿಗೆ ಅಣ್ಣ ಫಿದಾ; ಹೆಣ್ಣಿಗಾಗಿ ತಮ್ಮನ ಹತ್ಯೆ..!

ಗದಗ ಜಿಲ್ಲೆಯ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದ ಹೊರವಲಯದಲ್ಲಿ ಮನಕಲಕುವ ಘಟನೆ ನಡೆದಿದೆ. ತಮ್ಮನಿಗೆ ನಿಶ್ಚಯವಾಗಿದ್ದ ಹುಡುಗಿಯ ಮೇಲೆಯೇ ಕಣ್ಣಿಟ್ಟ ಅಣ್ಣ, ಆಕೆಯನ್ನು ಪಡೆಯಬೇಕೆಂಬ ಹುಚ್ಚು ಆಸೆಯಿಂದ ಸ್ವಂತ ತಮ್ಮನನ್ನೇ ಹತ್ಯೆ ಮಾಡಿದ ಕಿರಾತಕ ಘಟನೆ ಬೆಳಕಿಗೆ ಬಂದಿದೆ.

ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚಿಕ್ಕಮೂಲಂಗಿ ಗ್ರಾಮದ ನಿವಾಸಿಗಳಾದ ಅಶೋಕ ಮತ್ತು ಫಕ್ಕೀರಪ್ಪ ಸಹೋದರರು ಕುರಿಗಾಹಿಗಳಾಗಿದ್ದು, ಕೆಲಸದ ನಿಮಿತ್ತ ಗದಗ ಜಿಲ್ಲೆಗೆ ಬಂದಿದ್ದರು. ಇವರಿಬ್ಬರ ಮದುವೆ ಮಾಡಲು ಕುಟುಂಬಸ್ಥರು ಸಿದ್ಧತೆ ನಡೆಸುತ್ತಿದ್ದರು. ಅಶೋಕನಿಗೆ ಒಂದು ಹುಡುಗಿ ನಿಶ್ಚಯವಾಗಿದ್ದರೂ, ಅವನಿಗೆ ಆಸಕ್ತಿ ಇರಲಿಲ್ಲ. ಆದರೆ ತಮ್ಮ ಫಕ್ಕೀರಪ್ಪನಿಗೆ ನಿಶ್ಚಯವಾಗಿದ್ದ ಹುಡುಗಿಯ ಮೇಲೆಯೇ ಅಶೋಕನ ಮನಸ್ಸು ಹೋಗಿತ್ತು.

ಈ ವಿಷಯವಾಗಿ ಸಹೋದರರ ನಡುವೆ ಹಲವಾರು ಬಾರಿ ಜಗಳ ನಡೆದಿದ್ದು, ಘಟನೆ ನಡೆದ ದಿನವೂ ರಾತ್ರಿ ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ವಾಗ್ವಾದ ತಾರಕ್ಕೇರಿದಾಗ, ಅಶೋಕ ಸುಮಾರು 20-25 ಕೆ.ಜಿ ತೂಕದ ಕಲ್ಲನ್ನು ಫಕ್ಕೀರಪ್ಪನ ತಲೆಗೆ ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ನಂತರ ಯಾರೋ ಅಪರಿಚಿತರು ಕೊಲೆ ಮಾಡಿದ್ದಾರೆ ಎಂಬಂತೆ ನಾಟಕವಾಡಲು ಯತ್ನಿಸಿದ್ದಾನೆ.

ಕೊಲೆ ನಡೆದ ಬಳಿಕ ಅಶೋಕ ತಾನೇ ಪಾಲಕರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿ, ದುಷ್ಕರ್ಮಿಗಳು ತಮ್ಮನನ್ನು ಹತ್ಯೆ ಮಾಡಿದ್ದಾರೆ ಎಂದು ಕಥೆ ಕಟ್ಟಲು ಮುಂದಾಗಿದ್ದ. ಆದರೆ ಸ್ಥಳಕ್ಕೆ ಬಂದ ಶ್ವಾನ ದಳ ನೇರವಾಗಿ ಅಶೋಕನ ಬಳಿ ಹೋಗಿ ನಿಂತಿತ್ತು. ಇದರಿಂದ ಅನುಮಾನಗೊಂಡ ಪೊಲೀಸರು ಅಶೋಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ಮಾಡಿದುದಾಗಿ ಆತ ಒಪ್ಪಿಕೊಂಡಿದ್ದಾನೆ.

ತಮ್ಮನನ್ನು ಕೊಂದು ಆ ಹುಡುಗಿಯನ್ನು ಮದುವೆಯಾಗಬೇಕೆಂಬ ದುಷ್ಟ ಉದ್ದೇಶದಿಂದ ನಡೆದ ಈ ಕೃತ್ಯ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಕೊಲೆ ಮಾಡಿದ ಕೆಲವೇ ಗಂಟೆಗಳಲ್ಲೇ ಆರೋಪಿಯನ್ನು ಬಂಧಿಸಿರುವ ಗದಗ ಪೊಲೀಸರ ಕಾರ್ಯ ಶ್ಲಾಘನೀಯವಾಗಿದೆ.

ಒಡಹುಟ್ಟಿದ ತಮ್ಮನನ್ನೇ ಹೆಣ್ಣಿಗಾಗಿ ಕೊಲೆ ಮಾಡಿದ ಅಶೋಕ ಇದೀಗ ಜೈಲು ಸೇರುವಂತಾಗಿದೆ. ಈ ಘಟನೆ ಮಾನವೀಯ ಸಂಬಂಧಗಳ ಮೌಲ್ಯಗಳನ್ನು ಪ್ರಶ್ನಿಸುವಂತಿದೆ.

ಭ್ರಷ್ಟರ ಬೇಟೆ

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

6 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

8 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

13 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago