ಸರ್ಕಾರಿ ಕೆಲಸಕ್ಕೆ ಪದೇ ಪದೇ ಅಡ್ಡಿಪಡಿಸುತ್ತಿರುವ ನಕಲಿ ಪತ್ರಕರ್ತರನ್ನು ನಿಯಂತ್ರಿಸುವಂತೆ ಆಗ್ರಹಿಸಿ ಹಳಿಯಾಳ ಕರ್ನಾಟಕ ರಾಜ್ಯ ನೌಕರರ ಸಂಘದ ಮೂಲಕ ತಾಲೂಕಾ ಆಡಳಿತಕ್ಕೆ ಮನವಿ ನಿಡಿದ ಸರ್ಕಾರಿ ಅಧಿಕಾರಿಗಳು
ಹಳಿಯಾಳ-ಸರ್ಕಾರಿ ಕೆಲಸಕ್ಕೆ ಪದೇ ಪದೇ ಅಡ್ಡಿಪಡಿಸುತ್ತಿರುವ ನಕಲಿ ಪತ್ರಕರ್ತರನ್ನು ನಿಯಂತ್ರಿಸಿ’ ಎಂದು ಹಳಿಯಾಳದ ವಿವಿಧ ಅಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ನೌಕರರ ಸಂಘದ ಮೂಲಕ ಈ ಬಗ್ಗೆ ತಾಲೂಕಾ ಆಡಳಿತಕ್ಕೂ ನೌಕರರು ಪತ್ರ ಬರೆದಿದ್ದಾರೆ!
ಯಾವುದೇ ನೋಂದಣಿ, ಮಾನ್ಯತೆಗಳಿಲ್ಲದೇ ಪತ್ರಕರ್ತ ಎಂಬ ಸೋಗಿನಲ್ಲಿ ಅಧಿಕಾರಿ-ಸಿಬ್ಬಂದಿ ಕಾಡಿಸುವವರ ಸಂಖ್ಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗಿದೆ. ನಕಲಿ ಪತ್ರಕರ್ತರ ಹಾವಳಿಗೆ ಅಧಿಕಾರಿಗಳು ತತ್ತರಿಸಿದ್ದಾರೆ. ಇದೇ ರೀತಿ ಗಣೇಶ ರಾಥೋಡ್ ಎಂಬಾತರು ಅಧಿಕಾರಿಗಳಿಗೆ ಅನಗತ್ಯ ತೊಂದರೆ ನೀಡುತ್ತಿದ್ದು, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹಳಿಯಾಳದ ನೌಕರರು ಒತ್ತಾಯಿಸಿದ್ದಾರೆ.
`ಫೆಬ್ರವರಿ 3ರಂದು ಆಸ್ಪತ್ರೆಗೆ ನುಗ್ಗಿದ ಗಣೇಶ ರಾಥೋಡ್ ಹಾಗೂ ದಿವ್ಯಾ ಮಾಹಾಜನ್ ಎಂಬಾತರು ಅಲ್ಲಿನ ವೈದ್ಯಾಧಿಕಾರಿಗಳ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಕಚೇರಿಯಲ್ಲಿದ್ದ ಸಿಬ್ಬಂದಿ ತೇಜಸ್ವಿ ಪಾಲೇಕರ್ ಹಾಗೂ ವೈದ್ಯೆ ಡಾ ಸೋನಾ ಅವರ ವಿಡಿಯೋ ಮಾಡಿ, ಮಾನ ಕಳೆಯುವುದಾಗಿ ಬೆದರಿಕೆ ಒಡ್ಡಿದ್ದಾರೆ. ಈ ಬಗ್ಗೆ ಪೊಲೀಸ್ ದೂರು ನೀಡಲಾಗಿದ್ದು, ಅವರ ವಿರುದ್ಧ ತಾಲೂಕಾಡಳಿತವೂ ಕಠಿಣ ಕ್ರಮ ಜರುಗಿಸಬೇಕು’ ಎಂದು ಸರ್ಕಾರಿ ನೌಕರರ ಸಂಘದವರು ಆಗ್ರಹಿಸಿದ್ದಾರೆ.
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…