Latest

ಹತ್ತು ಲಕ್ಷಕ್ಕೆ ಬೇಡಿಕೆ, ಎರಡು ಲಕ್ಷ ಪಡೆಯುವಾಗ ಸಿಕ್ಕಿಬಿದ್ದ ಅತಿಥಿ ಶಿಕ್ಷಕ!

ಬೆಂಗಳೂರು: ಸರ್ಕಾರದ ಕಚೇರಿಗಳಲ್ಲಿ ಲಂಚ ಮತ್ತು ವಂಚನೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಅದನ್ನು ತಡೆಗಟ್ಟಲು ಲೋಕಾಯುಕ್ತ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ. ಇತ್ತೀಚೆಗೆ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕ ನಾಗರಾಜು ಹಾಗೂ ಖಾಸಗಿ ವ್ಯಕ್ತಿ ಸಂದೀಪ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹತ್ತು ಲಕ್ಷಕ್ಕೆ ಬೇಡಿಕೆ, ಎರಡು ಲಕ್ಷ ಪಡೆಯುವಾಗ ಸಿಕ್ಕಿಬಿದ್ದರು

ವಕೀಲ ಮಹೇಶ್ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಇಂದು ಟ್ರಾಪ್ ನಡೆಸಿದರು. ಪಹಣಿಯಲ್ಲಿ ಹೆಸರು ನೋಂದಣಿ ಮಾಡಲು ಹತ್ತು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಇಂದು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ, ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ನಾಗರಾಜು ಮತ್ತು ಸಂದೀಪ್ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ತಹಶೀಲ್ದಾರ್ ಸಂಪರ್ಕ, ಮಧ್ಯವರ್ತಿಗಳ ಲಂಚ ಲಾವಣ್ಯ

ಯಲಹಂಕ ಸ್ಪೆಷಲ್ ತಹಶೀಲ್ದಾರ್ ಮುನಿಸ್ವಾಮಿ ರೆಡ್ಡಿ ಈ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹಣದ ಲೆನ-ದಿನದಲ್ಲಿ ನಾಗರಾಜು ಮತ್ತು ಸಂದೀಪ್ ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಲಂಚದ ಆರೋಪದ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ತಕ್ಷಣವೇ ತನಿಖೆ ಆರಂಭಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮುಂದಿನ ಹಂತದಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

nazeer ahamad

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

12 hours ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

14 hours ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

2 days ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

2 days ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

2 days ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

2 days ago