Categories: CrimeLatest

ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಕೊಡಲು ಬಂದ ಪತಿ; ಅಕ್ರಮ ಸಂಬಂಧ ಕಂಡು ಇಂಜಿನಿಯರ್ ಪತ್ನಿಯಿಂದ ಕೊಲೆಯಾದ..!

ಭುವನೇಶ್ವರ: ಪತ್ನಿಯ ಹುಟ್ಟುಹಬ್ಬದಂದು ಆಕೆಗೆ ಸರ್ಪ್ರೈಸ್ ನೀಡಲು ಸಂತಸದಿಂದ ಮನೆಗೆ ಬಂದಿದ್ದ ಇಂಜಿನಿಯರ್‌ ಒಬ್ಬರು ಕೆಲವೇ ಗಂಟೆಗಳಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಒಡಿಶಾದಲ್ಲಿ ಸಂಚಲನ ಮೂಡಿಸಿದೆ. ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದ ಕಾರಣ, ಆಕೆ ತನ್ನ ಸಹೋದ್ಯೋಗಿ ಪ್ರೇಮಿಯೊಂದಿಗೆ ಸೇರಿ ಕೊಲೆ ಮಾಡಿದ್ದಾಳೆ ಎಂದು ಮೃತರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಮೃತರನ್ನು ಭುವನೇಶ್ವರದ ಇಂಜಿನಿಯರ್ ರಶ್ಮಿ ರಂಜನ್ ಸೇಠಿ ಎಂದು ಗುರುತಿಸಲಾಗಿದೆ. ಅವರ ಪತ್ನಿ ರಶ್ಮಿರೇಖಾ ಭೂಯಾನ್ ಕೂಡ ಇಂಜಿನಿಯರ್ ಆಗಿದ್ದು, ಸಹೋದ್ಯೋಗಿ ದೇಬಾಶಿಶ್ ಸ್ವೈನ್ ಜೊತೆ ಆಪ್ತ ಸಂಬಂಧ ಹೊಂದಿದ್ದಳು ಎಂದು ಆರೋಪಿಸಲಾಗಿದೆ.

ಕುಟುಂಬದವರ ಮಾಹಿತಿ ಹಾಗೂ ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಪತ್ನಿಯ ಅಕ್ರಮ ಸಂಬಂಧದ ವಿಚಾರ ತಿಳಿದ ಬಳಿಕ ರಶ್ಮಿ ರಂಜನ್ ಹಲವು ಬಾರಿ ವಿರೋಧ ವ್ಯಕ್ತಪಡಿಸಿ ಸಂಬಂಧ ಕಡಿದುಕೊಳ್ಳುವಂತೆ ಸೂಚಿಸಿದ್ದರು. ಇದರಿಂದ ದಂಪತಿ ನಡುವೆ ಆಗಾಗ ಕಲಹ ನಡೆಯುತ್ತಿತ್ತು ಎನ್ನಲಾಗಿದೆ.

ಜುಲೈ 16ರಂದು ರಶ್ಮಿರೇಖಾ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪತ್ನಿಗೆ ಸರ್ಪ್ರೈಸ್ ನೀಡಲು ರಶ್ಮಿ ರಂಜನ್ ಮನೆಗೆ ಆಗಮಿಸಿದ್ದರು. ಆದರೆ ಸಂಭ್ರಮದ ದಿನವೇ ಅವರು ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮೃತರ ಕುಟುಂಬಸ್ಥರ ಆರೋಪದಂತೆ, ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗುತ್ತಿದ್ದ ಕಾರಣ ರಶ್ಮಿರೇಖಾ ಮತ್ತು ಆಕೆಯ ಸಹೋದ್ಯೋಗಿ ದೇಬಾಶಿಶ್ ಸೇರಿ ಸಂಚು ರೂಪಿಸಿ ಕೊಲೆ ಎಸಗಿದ್ದಾರೆ. ಬಳಿಕ ಮೃತದೇಹವನ್ನು ಆಸ್ಪತ್ರೆಗೆ ಕೊಂಡೊಯ್ದು ಬಿಟ್ಟು, ಅಲ್ಲಿಂದ ಇಬ್ಬರೂ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪರಾರಿಯಾಗಿರುವ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಇತರೆ ಸಾಕ್ಷ್ಯಾಧಾರಗಳ ಆಧಾರದಲ್ಲಿ ಪ್ರಕರಣದ ನಿಖರ ಕಾರಣ ಮತ್ತು ಸತ್ಯಾಂಶವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

21 hours ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

21 hours ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

21 hours ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago