Crime

ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ!

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಗುಂಡಿಕ್ಕಿ ಕೊಂದು, ಬಳಿಕ ತಾನೇ ಪೊಲೀಸರಿಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇಟೋಳಿ ಗ್ರಾಮದಲ್ಲಿ ನಡೆದಿದೆ.
ಶಿಲ್ಪಾ ಸೀತಮ್ಮ (40) ಮೃತ ದುರ್ದೈವಿ, ಪತಿ ನಾಯಕಂಡ ಬೋಪಣ್ಣ (45) ಗುಂಡಿಕ್ಕಿ ಕೊಂದ ಆರೋಪಿ. ತನ್ನ ಪತ್ನಿ ಫೋನ್‌ನಲ್ಲಿ ಬೇರೆಯವರೊಂದಿಗೆ ಮಾತನಾಡುತ್ತಿದ್ದುದ್ದಕ್ಕೆ ಆಕ್ಷೇಪಿಸಿದ ನಂತರ ಇಬ್ಬರ ನಡುವೆ ಜಗಳವಾಗಿ ಪತಿ ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
17 ವರ್ಷದ ಹಿಂದೆ ಪರಸ್ಪರ ಪ್ರೀತಿಸಿ ಇಬ್ಬರು ಮದುವೆಯಾಗಿದ್ದರು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಲ್ಲದೇ ಬೋಪಣ್ಣ ವಿರಾಜಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದಲ್ಲಿ ಸರ್ವಿಸ್ ಸ್ಟೇಷನ್ ಹಾಗೂ ಕಾಫಿ ತೋಟದ ಮಾಲೀಕನಾಗಿದ್ದ.
ಶಿಲ್ಪಾ ಸೀತಮ್ಮ 2012 ರಿಂದ 2017ರ ವರೆಗೆ ಬೇಟೋಳಿ ಗ್ರಾಮ ಪಂಚಾಯತಿ ಸದಸ್ಯರಾಗಿ ಸೇವೆಸಲಿಸಿದ್ದರು. ಶುಕ್ರವಾರ (ಜು.19) ರಾತ್ರಿ ಬೇರೆಯವರೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಶನಿವಾರ ಬೆಳಗ್ಗೆಯೂ ಪತಿ ಆಕ್ಷೇಪಿಸಿದ್ದ, ಇದರಿಂದ ಇಬ್ಬರ ನಡುವೆ ಜಗಳ ಏರ್ಪಟ್ಟಿತ್ತು, ಕೊನೆಗೆ ಜಗಳ ವಿಕೋಪಕ್ಕೆ ತಿರುಗಿ ಪತಿಯೇ ಗುಂಡಿಕ್ಕಿ ಕೊಂದಿದ್ದಾನೆ. ಹತ್ಯೆ ಮಾಡಿ ಪೊಲೀಸರಿಗೆ ತಾನೇ ಶರಣಾಗಿದ್ದಾನೆ. ಬಳಿಕ ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭ್ರಷ್ಟರ ಬೇಟೆ

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

11 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

15 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

18 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

23 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

2 days ago