ಕಾಡಂಚಿನ ಹೆಡಿಯಾಲ ಸಮೀಪದ ಅಳಲಹಳ್ಳಿ ಚೈನ್ ಗೇಟ್ ಬಳಿ ಘಟನೆ ನಂಜನಗೂಡು: ಅರಣ್ಯ ಇಲಾಖೆ ಸಿಬ್ಬಂದಿಗಳ ಎಡವಟ್ಟಿಗೆ ಜೆಸಿಬಿ ಯಂತ್ರವೊಂದು ಸುಟ್ಟು ಕರಕಲಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದ ಚೈನ್ ಗೇಟ್ ಬಳಿ ನಡೆದಿದೆ. ಐತಿಹಾಸಿಕ ಧಾರ್ಮಿಕ ಕ್ಷೇತ್ರ ಶ್ರೀ ಬೇಲದಕುಪ್ಪೆ ಮಹದೇಶ್ವರ ದೇವಾಲಯಕ್ಕೆ ತೆರಳುವ ಮಾರ್ಗದಲ್ಲಿ ಘಟನೆ ನಡೆದಿದೆ. ಆನೆಕಂದಕ ನಿರ್ಮಾಣ ಕಾಮಗಾರಿ ನಡೆಸಲು ಜೆಸಿಬಿ ಯಂತ್ರ ಬಳಸಲಾಗುತ್ತಿದ್ದು ಅನಾರೋಗ್ಯದ ನಿಮಿತ್ತ ಜೆಸಿಬಿ ಚಾಲಕ ಜೆಸಿಬಿ ನಿಲ್ಲಿಸಿ ಆಸ್ಪತ್ರೆಗೆ ತೆರಳಿದ್ದರೆಂದು ಹೇಳಲಾಗಿದೆ. ಈ ವೇಳೆ ಕುರುಚಲು ಸಸ್ಯಗಳ ನಿರ್ಮೂಲನೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ಹಚ್ಚಿದ್ದಾರೆ. ಕುರುಚಲು ಸಸ್ಯಗಳಿಗೆ ಹಚ್ಚಿದ್ದ ಬೆಂಕಿ ಪಸರಿಸಿದ ಹಿನ್ನೆಲೆ ಸಮೀಪದಲ್ಲಿದ್ದ ಜೆಸಿಬಿ ಯಂತ್ರದ ಟಯರ್ ಮತ್ತು ಎಂಜಿನ್ ಗೆ ತಗುಲಿದೆ. ಬೆಂಕಿ ತಗುಲಿದ ಕೆಲವೇ ಸಮಯದಲ್ಲಿ ಜೆಸಿಬಿ ಯಂತ್ರ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣ ಸುಟ್ಟು ಕರುಕಲಾಗಿದೆ.
ಅರಣ್ಯ ಇಲಾಖೆಯು ಅರಣ್ಯ ಪ್ರದೇಶಕ್ಕೆ ಪ್ರವೇಶಿಸಲು ನಿರ್ಭಂದ ಹೇರಿರುವ ಕಾರಣ ಸ್ಥಳಕ್ಕೆ ತುರ್ತಾಗಿ ಅಗ್ನಿಶಾಮಕ ವಾಹನವೂ ಸಹ ತಲುಪಲು ಸಾಧ್ಯವಾಗಿಲ್ಲವೆಂದು ಹೇಳಲಾಗಿದೆ. ಒಟ್ಟಾರೆ ಅರಣ್ಯ ಇಲಾಖೆ ಸಿಬ್ಬಂದಿಗಳ ಎಡವಟ್ಟಿಗೆ ಖಾಸಗಿ ವ್ಯಕ್ತಿಗೆ ಸೇರಿದ ಲಕ್ಷಾಂತರ ರೂಪಾಯಿಯ ಜೆಸಿಬಿ ಯಂತ್ರ ಸುಟ್ಟುಕರಕಲಾಗಿ ಕೇವಲ ಅವಶೇಷವಾಗಿ ಮಾತ್ರ ಉಳಿದಿದೆ. ವರದಿ: ಮೋಹನ್
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…